ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲು: ವರದಿ

Prasthutha|

ಬೆಂಗಳೂರು: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆರೋಗ್ಯ ತೀವ್ರ ಹದಗೆಟ್ಟಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಆಧಿಕೃತ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.

- Advertisement -

ದಾವೂದ್ ಇಬ್ರಾಹಿಂ ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಭಾರತ ಹಾಗೂ ಪಾಕಿಸ್ತಾನದ ಅಧಿಕಾರಿಗಳು ಖಚಿತಪಡಿಸಿಲ್ಲ. ಹಠಾತ್ ಆರೋಗ್ಯ ಹದಗೆಡಲು ವಿಷವೇ ಕಾರಣ ಎಂಬ ಊಹಾಪೋಹಗಳು ದಟ್ಟವಾಗಿದ್ದು, ಕರಾಚಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.



Join Whatsapp