Home ಟಾಪ್ ಸುದ್ದಿಗಳು ನಿರುದ್ಯೋಗ ಸಮಸ್ಯೆ: ಆತ್ಮ ಹತ್ಯೆಗೈದ ಯುವಕ

ನಿರುದ್ಯೋಗ ಸಮಸ್ಯೆ: ಆತ್ಮ ಹತ್ಯೆಗೈದ ಯುವಕ

ಚಾಮರಾಜನಗರ: ಕೆಲಸ ಸಿಗದೇ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ.

22 ರ ಹರೆಯದ ಮನು ಆತ್ಮಹತ್ಯೆ ಮಾಡಿಕೊಂಡ ಯುವಕ. ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದ ಈತನಿಗೆ ಎಷ್ಟೇ ಅಲೆದಾಡಿದರೂ ಯಾವುದೇ ನೌಕರಿ ಸಿಕ್ಕಿರಲಿಲ್ಲ. ಇದರಿಂದ ಖಿನ್ನತೆಗೆ ಒಳಗಾಗಿದ್ದ ಆತ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ವಿಷ ಸೇವಿಸಿರುವುದು ತಿಳಿದ ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ಬಗ್ಗೆ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Join Whatsapp
Exit mobile version