ನವದೆಹಲಿ: ನಿರುದ್ಯೋಗ ಸಮಸ್ಯೆಯು ಕೋವಿಡ್–19ರ ಸಾಂಕ್ರಾಮಿಕ ರೋಗದ ಸಮಯದಲ್ಲಿದ್ದ ಪರಿಸ್ಥಿತಿಗಿಂತ ಕೆಟ್ಟದಾಗಿದೆ’ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಹೇಳಿದ್ದಾರೆ.
ದೇಶದಲ್ಲಿ ನರೇಂದ್ರ ಮೋದಿ ಸರ್ಕಾರದ ಅವಧಿಯಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದೆ. ಪ್ರತಿ ವರ್ಷ 2 ಕೋಟಿ ಉದ್ಯೋಗ ಸೃಷ್ಟಿಸುವ ಭರವಸೆಯನ್ನು ಈಡೇರಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿಯ ಅಂಕಿಅಂಶಗಳ ಪ್ರಕಾರ, 25 ರಿಂದ 29 ವರ್ಷ ವಯಸ್ಸಿನ ಯುವಜನತೆಯು ನಿರುದ್ಯೋಗ ಸಮಸ್ಯೆ ಎದುರಿಸುತ್ತಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಈ ಪ್ರಮಾಣ ಅತಿ ಹೆಚ್ಚಾಗಿದೆ. 20 ರಿಂದ 24 ವರ್ಷ ವಯಸ್ಸಿನ ಯುವಜನತೆಯ ನಿರುದ್ಯೋಗ ಪ್ರಮಾಣವು ಶೇಕಡಾ 45.5ರಷ್ಟಿದೆ ಎಂದಿದ್ದಾರೆ.