ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ: ಮುಸ್ಲಿಮ್ ಎಂದು ಭಾವಿಸಿ ವರದಿಗಾರನ ಮೇಲೆ ಸಂಘಪರಿವಾರದ ಕಾರ್ಯಕರ್ತರಿಂದ ಹಲ್ಲೆ

Prasthutha|

ಮಂಗಳೂರು: ಮಂಗಳೂರಿನಲ್ಲಿ ಅನೈತಿಕ ಪೊಲೀಸ್ ಗಿರಿ ನಡೆಸಿದ ಘಟನೆ ಬಗ್ಗೆ ವರದಿಯಾಗಿದ್ದು, ಮುಸ್ಲಿಮ್ ಎಂದು ಭಾವಿಸಿ ವರದಿಗಾರನ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.

- Advertisement -


ಅಭಿಜಿತ್ ಕೊಲ್ಪೆ ಮೇಲೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ಕಾವೂರು ರೆಸ್ಟೋರೆಂಟ್ ನಲ್ಲಿ ಸ್ನೇಹಿತೆ ಜೊತೆ ಊಟಕ್ಕೆ ಹೋಗಿದ್ದಾಗ ಘಟನೆ ಸಂಭವಿಸಿದೆ.

ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಚೇತನ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಗೊಳಪಡಿಸಿದ್ದಾರೆ. ಜು. 28ರಂದು ಎಫ್‌ ಐಆರ್ ದಾಖಲಾಗಿದ್ದು, ಬಳಿಕ ಪ್ರಕರಣದ ಆರೋಪಿ, ಕೋಟೆಕಾರ್ ನಿವಾಸಿ ಚೇತನ್ ಎಂಬಾತನನ್ನು ಬಂಧಿಸಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ.

Join Whatsapp