ಹತ್ಯೆಗೈದ ರೀತಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Prasthutha|

ಬೆಂಗಳೂರು: ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಬುಳ್ಳಹಳ್ಳಿ ಗೇಟ್ ಬಳಿ ಪತ್ತೆಯಾಗಿದೆ.

- Advertisement -


ಆರೋಪಿಗಳು ತಲೆಯನ್ನು ಮಚ್ಚಿನಿಂದ ಕೊಚ್ಚಿದ್ದು, ಬೆರಳುಗಳನ್ನು ಸಹ ಕತ್ತರಿಸಿ ದೇಹವನ್ನು ಬೆತ್ತಲೆಗೊಳಿಸಿ ನಗರದ ಹೊರವಲಯದಲ್ಲಿ ಎಸೆದು ಹೋಗಿದ್ದಾರೆ.


ಸ್ಥಳಕ್ಕೆ ವಿಜಯಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೇರೆಡೆ ಕೊಲೆ ಮಾಡಿ ಶವ ಬಿಸಾಕಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರಿಗೆ ಯಾವುದೇ ಸಾಕ್ಷಿಗಳು ಸಿಗದಂತೆ ಆರೋಪಿಗಳು ಪ್ಲಾನ್ ಮಾಡಿ ಹತ್ಯೆಗೈದಿದ್ದಾರೆ. ಕೊಲೆಯಾಗಿರುವ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚಲು ಪೊಲೀಸರು ತಂಡವನ್ನು ರಚಿಸಿದ್ದಾರೆ.

- Advertisement -

ಈ ಬಗ್ಗೆ ಮಾತನಾಡಿರುವ ಎಸ್’ಪಿ ಮಲ್ಲಿಕಾರ್ಜುನ ಬಾಲದಂಡಿ, ವಿಜಯಪುರ ಠಾಣಾ ವ್ಯಾಪ್ತಿಯ ಬುಲ್ಲ ಹಳ್ಳಿ ಸರ್ವೆ ನಂಬರ್ಗೆ ಸೇರಿದ ಜಾಗದಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಈ ಜಾಗ ರಾಷ್ಟ್ರೀಯ ಹೆದ್ದಾರಿಯಿಂದ ಸುಮಾರು 200 ಮೀಟರ್ ದೂರದಲ್ಲಿದೆ. ನಿರ್ಜನ ಪ್ರದೇಶದಲ್ಲಿ ನಿನ್ನೆ ರಾತ್ರಿ ಅಥವಾ ಮುಂಜಾನೆ ವೇಳೆ ಶವ ತಂದು ಹಾಕಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳೀಯರೊಬ್ಬರು ಶವ ಕಂಡು ಠಾಣೆಗೆ ಮಾಹಿತಿ ನೀಡಿದ್ದಾರೆ. ಮುಖ ಮತ್ತು ಕೈಗಳ ಮೇಲೆ ಕತ್ತಿ ಅಥವಾ ಮಚ್ಚಿನಿಂದ ಕೊಚ್ಚಲಾಗಿದೆ. ಬೇರೆಡೆ ಕೊಲೆ ಮಾಡಿ ಶವ ಇಲ್ಲಿ ತಂದು ಹಾಕಿರುವ ಸಾಧ್ಯತೆ ಇದೆ. ಶವದ ಗುರುತು ಮತ್ತು ಆರೋಪಿಗಳ ಪತ್ತೆ ಮಾಡುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

Join Whatsapp