ಸುಟ್ಟ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆ

Prasthutha|

ಬೆಂಗಳೂರು : ಅಪರಿಚಿತ ಮಹಿಳೆಯ ಶವ ಸುಟ್ಟ ಸ್ಥಿತಿಯಲ್ಲಿ ಬೆಂಗಳೂರಿನ ರಾಮಸಂದ್ರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.
ಸುಮಾರು 25 ರಿಂದ 30 ವರ್ಷದ ಮಹಿಳೆಯ ಶವ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -


ಮಹಿಳೆ ಮೇಲೆ ಅತ್ಯಾಚಾರವೆಸಗಿ ಬಳಿಕ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಅಪರಿಚಿತ ಮಹಿಳೆಯ ಶವ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Join Whatsapp
Exit mobile version