Home ಟಾಪ್ ಸುದ್ದಿಗಳು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ: ಪ್ರಣಾಳಿಕೆಯಲ್ಲಿ ಬಿಜೆಪಿ ಭರವಸೆ

ಬೆಂಗಳೂರು: ರಾಜ್ಯದಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಲು ರಣತಂತ್ರ ರೂಪಿಸಿರುವ ಬಿಜೆಪಿ ಯುವಕರು, ರೈತಾಪಿ ವರ್ಗದವರು ಹಾಗೂ ಮಧ್ಯಮ ವರ್ಗದವರನ್ನು ಸೆಳೆಯಲು ಮುಂದಾಗಿದ್ದು, ಏಕರೂಪ ನೀತಿ ಸಂಹಿತೆ ಜಾರಿಯ ಭರವಸೆ ನೀಡಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಂಗಳೂರಿನಲ್ಲಿಂದು ಪಕ್ಷದ ಪ್ರಜಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು. ಪ್ರತಿದಿನ ಬಿಪಿಎಲ್ ಕಾರ್ಡ್ ದಾರರಿಗೆ ಅರ್ಧ ಲೀಟರ್ ಹಾಲು ಉಚಿತವಾಗಿ ನೀಡಲಾಗುವುದು. ಬಿಪಿಎಲ್ ಕಾರ್ಡ್‌ದಾರರಿಗೆ ಬಿಪಿಎಲ್ ಕುಟುಂಬಕ್ಕೆ ವರ್ಷಕ್ಕೆ  3 ಉಚಿತ ಗ್ಯಾಸ್ ಸಿಲಿಂಡರ್ ನೀಡುವುದಾಗಿ ಪ್ರಕಟಿಸಿದೆ.

ಪ್ರತಿ ತಿಂಗಳು 5 ಕೆಜಿ ಅಕ್ಕಿ ಜೊತೆಗೆ 5ಕೆಜಿ ಸಿರಿಧಾನ್ಯ, ಯುಗಾದಿ, ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬಕ್ಕೆ ಉಚಿತ ಸಿಲಿಂಡರ್‌ಗಳ ಜೊತೆಗೆ ಪಕ್ಷ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ  ಏಕರೂಪ ಸಂಹಿತೆಯನ್ನು ಜಾರಿಗೆ ತರುವುದಾಗಿ ಹೇಳಿದೆ.

 ಸರ್ವರಿಗೂ ಸೂರು ಯೋಜನೆ ಕಲ್ಪಿಸಲು ಮುಂದಾಗಿದ್ದು, ಗ್ರಾಮೀಣ ಭಾಗದಲ್ಲಿ 10 ಲಕ್ಷ ಮನೆ ನಿರ್ಮಾಣಕ್ಕೆ ಭರವಸೆ ನೀಡಿದೆ, 1 ಮನೆ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಆರ್ಥಿಕ ನೆರವು ನೀಡುವುದಾಗಿ ಬಿಜೆಪಿ ಪ್ರಕಟಿಸಿದೆ.

ಬಹುಮಹಡಿ ಯೋಜನೆಯಡಿ 5 ಲಕ್ಷ ಮನೆ ಪೋಷಣೆ ಯೋಜನೆಯಡಿ ಹಾಲು, ಪಡಿತರ ಕಿಟ್ ವಿತರಣೆ ಒದಗಿಸಲು ಮುಂದಾಗಿದ್ದು, ಕಡಿಮೆ ಬೆಲೆಯಲ್ಲಿ ಗುಣಮಟ್ಟದ ಆಹಾರ ವಸ್ತುಗಳ ಮಾರಾಟ ಮಾಡುವುದಾಗಿ ಆಶ್ವಾಸನೆ ನೀಡಲಾಗಿದೆ.

Join Whatsapp
Exit mobile version