ಬಿಜೆಪಿ ಸರಕಾರ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ, ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ

Prasthutha|

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಿದೆ ಮತ್ತು ಮುಸ್ಲಿಮರಿಗಿರುವ ಮೀಸಲಾತಿಯನ್ನು ತೆಗೆದು ಹಾಕಲಿದೆ ಎಂದು ಹೇಳಿದ್ದಾರೆ.

- Advertisement -

ರಾಜ್ಯದಲ್ಲಿ ಸುಧಾರಣೆಯನ್ನು ಜಾರಿಗೆ ತರಲು ಸಮಿತಿಯನ್ನು ರಚಿಸಲಾಗುವುದು. ರಾಜ್ಯದಲ್ಲಿ ಮುಸ್ಲಿಮರಿಗೆ ಇರುವ ಶೇಕಡ 4 ರಷ್ಟು ಮೀಸಲಾತಿಯನ್ನು ಅಕ್ರಮ ಕೋಟಾ ಎಂದು ಅಮಿತ್ ಷಾ ಹೇಳಿದ್ದಾರೆ. ಇದನ್ನು ರದ್ದುಗೊಳಿಸುವುದಾಗಿ ಹೇಳಿದ ಅಮಿತ್ ಶಾ, ಒಬಿಸಿಗಳು, ದಲಿತರು ಮತ್ತು ಎಸ್ಟಿಗಳ ಕೋಟಾವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ.