Home ಟಾಪ್ ಸುದ್ದಿಗಳು ಬಿಜೆಪಿ ಸರಕಾರ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ, ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ

ಬಿಜೆಪಿ ಸರಕಾರ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ, ಮುಸ್ಲಿಂ ಮೀಸಲಾತಿ ರದ್ದು: ಅಮಿತ್ ಶಾ

ಹೈದರಾಬಾದ್: ತೆಲಂಗಾಣದಲ್ಲಿ ಬಿಜೆಪಿ ಪರವಾಗಿ ಚುನಾವಣಾ ಪ್ರಚಾರ ಮಾಡಿದ ಕೇಂದ್ರ ಗೃಹಸಚಿವ ಅಮಿತ್ ಶಾ, ಬಿಜೆಪಿ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಲಿದೆ ಮತ್ತು ಮುಸ್ಲಿಮರಿಗಿರುವ ಮೀಸಲಾತಿಯನ್ನು ತೆಗೆದು ಹಾಕಲಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಸುಧಾರಣೆಯನ್ನು ಜಾರಿಗೆ ತರಲು ಸಮಿತಿಯನ್ನು ರಚಿಸಲಾಗುವುದು. ರಾಜ್ಯದಲ್ಲಿ ಮುಸ್ಲಿಮರಿಗೆ ಇರುವ ಶೇಕಡ 4 ರಷ್ಟು ಮೀಸಲಾತಿಯನ್ನು ಅಕ್ರಮ ಕೋಟಾ ಎಂದು ಅಮಿತ್ ಷಾ ಹೇಳಿದ್ದಾರೆ. ಇದನ್ನು ರದ್ದುಗೊಳಿಸುವುದಾಗಿ ಹೇಳಿದ ಅಮಿತ್ ಶಾ, ಒಬಿಸಿಗಳು, ದಲಿತರು ಮತ್ತು ಎಸ್ಟಿಗಳ ಕೋಟಾವನ್ನು ಹೆಚ್ಚಿಸುವುದಾಗಿ ಭರವಸೆ ನೀಡಿದ್ದಾರೆ.

Join Whatsapp
Exit mobile version