ಸೈನಿಕರಿಗೆ ಒಂದು ಶ್ರೇಣಿ ಒಂದು ಪಿಂಚಣಿ ಪರಿಷ್ಕರಣೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Prasthutha|

ನವದೆಹಲಿ: ಒಂದು ಶ್ರೇಣಿ ಒಂದು ಪಿಂಚಣಿ (ಒಆರ್’ಒಪಿ) ಯೋಜನೆಯಡಿ ಸಶಸ್ತ್ರ ಪಡೆಗಳ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಪಿಂಚಣಿಯನ್ನು ಪರಿಷ್ಕರಿಸಲು ಕೇಂದ್ರ ಸಚಿವ ಸಂಪುಟವು ಅನುಮೋದನೆ ನೀಡಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.

- Advertisement -

ಪರಿಷ್ಕೃತ ಪಿಂಚಣಿಗಳು ಜುಲೈ 1, 2019 ರಿಂದ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿವೆ.

ಈ ನಿರ್ಧಾರದಿಂದ 25.13 ಲಕ್ಷಕ್ಕೂ ಹೆಚ್ಚು ನಿವೃತ್ತ ಯೋಧರು ಪ್ರಯೋಜನ ಪಡೆಯಲಿದ್ದಾರೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ.

- Advertisement -

ಯುದ್ಧದಲ್ಲಿ ಮಡಿದ ಯೋಧರ ಪತ್ನಿಯರಿಗೆ ಮತ್ತು ಅಂಗವಿಕಲ ಪಿಂಚಣಿದಾರರು ಸೇರಿದಂತೆ ಕುಟುಂಬ ಪಿಂಚಣಿದಾರರಿಗೂ ಈ ಪ್ರಯೋಜನವನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದರು.

Join Whatsapp