ಪ್ರಧಾನಮಂತ್ರಿ ‘ಸೂರ್ಯೋದಯ ಯೋಜನೆ’ ಘೋಷಿಸಿದ ಕೇಂದ್ರ ಸರ್ಕಾರ

Prasthutha|

ದೆಹಲಿ: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠೆ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ಸೂರ್ಯೋದಯ ಯೋಜನೆಯನ್ನು ಘೋಷಿಸಿದ್ದಾರೆ.

- Advertisement -

ಅಯೋಧ್ಯೆಯಿಂದ ಹಿಂದಿರುಗಿದ ನಂತರ ನಾನು ತೆಗೆದುಕೊಂಡ ಮೊದಲ ನಿರ್ಧಾರವೆಂದರೆ ನಮ್ಮ ಸರ್ಕಾರವು 1 ಕೋಟಿ ಮನೆಗಳಿಗೆ ಮೇಲ್ಛಾವಣಿಯ ಸೋಲಾರ್ ಅನ್ನು ಸ್ಥಾಪಿಸುವ ಗುರಿಯೊಂದಿಗೆ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಅನ್ನು ಪ್ರಾರಂಭಿಸುತ್ತದೆ. ಇದು ಬಡ ಮತ್ತು ಮಧ್ಯಮ ವರ್ಗದವರ ವಿದ್ಯುತ್ ಬಿಲ್ ಅನ್ನು ಕಡಿಮೆ ಮಾಡುವುದಲ್ಲದೆ, ಇಂಧನ ಕ್ಷೇತ್ರದಲ್ಲಿ ಭಾರತವನ್ನು ಸ್ವಾವಲಂಬಿಯನ್ನಾಗಿ ಮಾಡುತ್ತದೆ ಎಂದು ಮೋದಿ ಹೇಳಿದ್ದಾರೆ.



Join Whatsapp