ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Prasthutha|

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಆವತಿ ಗ್ರಾಮದ 35 ಎಕರೆ ಪ್ರದೇಶದಲ್ಲಿ ಬ್ಯೂರೋ ಆಫ್ ಪೊಲೀಸ್ ರೀಸರ್ಚ್ ಅಂಡ್ ಡೆವಲಪ್‌ಮೆಂಟ್ (ಬಿ.ಪಿ.ಆರ್.ಡಿ.)ಸಂಸ್ಥೆಯಡಿ ಕಾರ್ಯನಿರ್ವಹಿಸುವ, ಕೇಂದ್ರೀಯ ಪತ್ತೇದಾರಿ ತರಬೇತಿ ಶಾಲೆಯ ಕಟ್ಟಡದ ಶಂಕುಸ್ಥಾಪನೆಯನ್ನು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶನಿವಾರ ನೆರವೇರಿಸಿದರು.

- Advertisement -

 ಕೇಂದ್ರ ಸಂಸದೀಯ ವ್ಯವಹಾರಗಳು,ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ವೈದಕೀಯ ಶಿಕ್ಷಣ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಕೆ.ಸುಧಾಕರ್, ಬಿಪಿಆರ್‌ಡಿ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ,ಐಟಿಬಿಪಿ ಮಹಾನಿರ್ದೇಶಕ ಅನೀಶ್ ದಯಾಳ್ ಸಿಂಗ್,ಹೆಚ್ಚುವರಿ ಮಹಾನಿರ್ದೇಶಕ ನೀರಜ್ ಸಿನ್ಹಾ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್‌ಸೂದ್, ಬೆಂಗಳೂರು ಪೊಲೀಸ್ ಮಹಾನೀರಿಕ್ಷಕ ಎಂ.ಚಂದ್ರಶೇಖರ್, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Join Whatsapp