Home ಟಾಪ್ ಸುದ್ದಿಗಳು ಲಖಿಂಪುರ್ ರೈತರ ಹತ್ಯೆ ಹಿಂದೆ ಕೇಂದ್ರ ಸಚಿವ ಅಜಯ್ ಮಿಶ್ರಾ ಕೈವಾಡ: ಉ.ಪ್ರ ಬಿಜೆಪಿ ನಾಯಕ

ಲಖಿಂಪುರ್ ರೈತರ ಹತ್ಯೆ ಹಿಂದೆ ಕೇಂದ್ರ ಸಚಿವ ಅಜಯ್ ಮಿಶ್ರಾ ಕೈವಾಡ: ಉ.ಪ್ರ ಬಿಜೆಪಿ ನಾಯಕ

ಲಕ್ನೋ: ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆಗೆ ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಕೈವಾಡವಿದೆ ಎಂದು ಬಿಜೆಪಿ ನಾಯಕ, ಉತ್ತರಪ್ರದೇಶ ಬಿಜೆಪಿಯ ರಾಜ್ಯ ಕಾರ್ಯಕಾರಿಣಿ ಸದಸ್ಯ ರಾಮ್ ಇಕ್ಬಾಲ್ ಸಿಂಗ್ ಆರೋಪಿಸಿದ್ದಾರೆ.

ಅಜಯ್ ಮಿಶ್ರಾ ಅವರನ್ನು ಕೇಂದ್ರ ಸಚಿವ ಸ್ಥಾನದಿಂದ ತೆಗೆದುಹಾಕುವಂತೆ ಅವರು ಪ್ರಧಾನಿ ನರೇಂದ್ರ ಮೋದಿಯವರನ್ನು ವಿನಂತಿಸಿದ್ದಾರೆ. “ಅವರು ಖಂಡಿತ ರೈತರ ಕ್ಷಮೆ ಕೇಳಬೇಕು. ಆದರೆ ಮಿಶ್ರಾ ತನ್ನ ಮಗನನ್ನು ರಕ್ಷಿಸಲು ಪ್ರಯತ್ನಿಸುತ್ತಿದ್ದಾರೆ. ಇದುವರೆಗೆ ಅವರು ಪಶ್ಚಾತ್ತಾಪ ಪಡಲಿಲ್ಲ. ಈ ಘಟನೆಯು ಮಾನವೀಯತೆಗೆ ಹಾನಿಕಾರಕವಾಗಿದೆ ಎಂದು ಅವರು ಹೇಳಿದ್ದಾರೆ.

‘ಅವರ ಮಗ ರೈತರನ್ನು ಕಾರು ಹರಿಸಿ ಕೊಂದು ಹಾಕಿದ. ಸುಪ್ರೀಂ ಕೋರ್ಟ್ ಸೂಚಿಸಿದ ನಂತರವೇ ಆಶಿಶ್ ಮಿಶ್ರಾನನ್ನು ಬಂಧಿಸಲಾಯಿತು. ಆದರೆ ಅಜಯ್ ಮಿಶ್ರಾ ಇನ್ನೂ ಸಂಪುಟದಲ್ಲಿದ್ದಾರೆ. ಈ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಸಿಂಗ್ ಹೇಳಿದರು.

Join Whatsapp
Exit mobile version