ನವದೆಹಲಿ: ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ಸೋದರಳಿಯ ನಂದ ಕಿಶೋರ್ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇದು ಆತ್ಮಹತ್ಯೆ ಪ್ರಕರಣ ಎಂದು ತಿಳಿದುಬಂದಿದೆ. ನಂದ ಕಿಶೋರ್ ಲಕ್ನೋದ ದುಬಗ್ಗದ ಬಿಗಾರಿಯಾ ಪ್ರದೇಶದಲ್ಲಿ ಆಸ್ತಿ ಡೀಲರ್ ಆಗಿ ಕೆಲಸ ಮಾಡುತ್ತಿದ್ದರು. ಅವರು ಕೆಲವು ದಿನಗಳಿಂದ ಆರೋಗ್ಯ ಸಮಸ್ಯೆಯಿಂದ ತೊಂದರೆಗೊಳಗಾಗಿದ್ದರು’ ಎಂದು ನಂದ್ ಕಿಶೋರ್ ಪುತ್ರ ವಿಶಾಲ್ ಮಾಹಿತಿ ನೀಡಿದ್ದಾರೆ.
ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆಗೆ ಮೋಹನ್ಲಾಲ್ಗಂಜ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕೌಶಲ್ ಕಿಶೋರ್ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದಾರೆ. ಅವರ ಸೋದರಳಿಯ ಆತ್ಮಹತ್ಯೆ ಮಾಡಿಕೊಂಡಿದ್ದು, ಕಾರಣಗಳು ತಿಳಿದುಬಂದಿಲ್ಲ ಎಂದು ತನಿಖೆಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.