Home ಟಾಪ್ ಸುದ್ದಿಗಳು ಕೇಂದ್ರ ಸಚಿವ ನಿತಿನ್ ಗಡ್ಕರಿ ಯೂಟ್ಯೂಬ್ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದನೆ!

ಕೇಂದ್ರ ಸಚಿವ ನಿತಿನ್ ಗಡ್ಕರಿ ಯೂಟ್ಯೂಬ್ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದನೆ!

ಮುಂಬೈ:  ಕೇಂದ್ರ ಸಚಿವ ನಿತಿನ್ ಗಡ್ಕರಿ ಯೂಟ್ಯೂಬ್ ನಿಂದ ತಿಂಗಳಿಗೆ 4 ಲಕ್ಷ ರೂ ಸಂಪಾದಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

ಹರಿಯಾಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ, ತಮ್ಮ ಕೋವಿಡ್ ಲಾಕ್ ಡೌನ್ ಅವಧಿಯ ಕುರಿತ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಕೊರೋನಾ ಕಾಲದಲ್ಲಿ ಲಾಕ್‌ಡೌನ್ ಆದಾಗ ತಾವು ಮನೆಯಲ್ಲೇ ತಮ್ಮ ಸಮಯವನ್ನು ಕಳೆದಿದ್ದು ಹೇಗೆ ಎಂಬುದನ್ನು ತಿಳಿಸಿದ್ದಾರೆ.

‘ಕೊರೋನಾ ಸಮಯದಲ್ಲಿ ನಾನು ಎರಡು ಕೆಲಸ ಮಾಡಿದೆ. ಮನೆಯಲ್ಲೇ ಅಡುಗೆ ಮಾಡುವುದನ್ನು ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲು ಆರಂಭಿಸಿದೆ. ಆನ್ ಲೈನ್‌ನಲ್ಲಿ ಬಹಳಷ್ಟು ಭಾಷಣ ಮಾಡಿದೆ. ಅದನ್ನು ಯೂಟ್ಯೂಬ್‌ಗೆ ಅಪ್ಲೋಡ್ ಮಾಡುತ್ತಿದ್ದೆವು. ಅದಕ್ಕೆ ವ್ಯಾಪಕವಾದ ಪ್ರೇಕ್ಷಕರು ಸಿಕ್ಕಿದ್ದು, ಈಗ ಯೂಟ್ಯೂಬ್ ನನಗೆ ತಿಂಗಳಿಗೆ 4 ಲಕ್ಷ ರೂಪಾಯಿ ಪಾವತಿಸುತ್ತಿದೆ’ ಎಂದು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್, ಗುರುಗ್ರಾಮ್ ಲೋಕಸಭಾ ಸದಸ್ಯ ರಾವ್ ಇಂದರ್ಜಿತ್ ಸಿಂಗ್ ಮತ್ತು ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು, ಜಿಲ್ಲಾಡಳಿತ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) ಹಾಜರಿದ್ದರು.

Join Whatsapp
Exit mobile version