ಕೇಂದ್ರ ಸಚಿವ ಗಡ್ಕರಿಗೆ ಜೀವ ಬೆದರಿಕೆ: ಹಿಂಡಲಗಾ ಜೈಲಿನ ಕೈದಿ ವಶಕ್ಕೆ

Prasthutha|

ಬೆಳಗಾವಿ: ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂಡಲಗಾ ಜೈಲಿನ ಕೈದಿಯನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ.

- Advertisement -


ಜಯೇಶ್ ಕಾಂತಾ ಅಲಿಯಾಸ್ ಜಯೇಶ್ ಪೂಜಾರಿಯನ್ನು ಪೊಲೀಸರು ವಶಕ್ಕೆ ಪಡೆದು ಕರೆದೊಯ್ದು ತೀವ್ರ ವಿಚಾರಣೆ ಕೈಗೊಂಡಿದ್ದಾರೆ.


ಕಳೆದ ಮಾ.21ರಂದು ಮಹಾರಾಷ್ಟ್ರದ ನಾಗ್ಪುರದ ಸಚಿವರ ಕಚೇರಿಗೆ ಕರೆ ಮಾಡಿ ಕೈದಿಯ ಹೆಸರಿನಲ್ಲಿ ಜೀವ ಬೆದರಿಕೆ ಒಡ್ಡಲಾಗಿತ್ತು. ಈ ಹಿಂದೆ ಸಹ ಜ.14ರಂದು ಸಚಿವರ ಕಚೇರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿ 10 ಕೋಟಿ ರೂಪಾಯಿ ಹಣಕ್ಕೆ ಬೇಡಿಕೆ ಇಡಲಾಗಿತ್ತು.

- Advertisement -


ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಹಿಂಡಲಗಾ ಜೈಲಿಗೆ ಭೇಟಿ ನೀಡಿ ಹಲವು ಬಾರಿ ತನಿಖೆ ನಡೆಸಿದ್ದರು.



Join Whatsapp