ಅಕ್ಕಿ ಕೊಡಲು ಕೇಂದ್ರ ಸಚಿವ ಪಿಯೂಷ್ ಗೋಯಲ್ ನಿರಾಕರಣೆ: ಮುನಿಯಪ್ಪ ಆಕ್ರೋಶ

Prasthutha|

ನವದೆಹಲಿ: ಅನ್ನಭಾಗ್ಯ ಯೋಜನೆ ಜಾರಿಗಾಗಿ ಅಕ್ಕಿ ಹೊಂದಿಸಲು ಸಚಿವ ಕೆಎಚ್ ಮುನಿಯಪ್ಪ ಇಂದು (ಜೂನ್ 23) ನವದೆಹಲಿಯಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿದರು. ಈ ವೇಳೆ ಕರ್ನಾಟಕಕ್ಕೆ ಅಕ್ಕಿ ಪೂರೈಸುವಂತೆ ಮನವಿ ಮಾಡಿದರು. ಆದರೆ, ಪಿಯೂಷ್ ಗೋಯಲ್ ಅವರು ಹಾರಿಕೆಯ ಉತ್ತರ ನೀಡಿದ್ದಾರೆ ಎಂದು ಮುನಿಯಪ್ಪ ಹೇಳಿದ್ದಾರೆ.

- Advertisement -


ಪಿಯೂಷ್ ಗೋಯಲ್ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮುನಿಯಪ್ಪ, ಅಕ್ಕಿ ಕೊಡಲು ಆಗುವುದಿಲ್ಲ ಎಂದು ಗೋಯಲ್ ಹೇಳಿದ್ದಾರೆ. ಹೆಚ್ಚುವರಿ ಅಕ್ಕಿ ಪೂರೈಸಲು ಆಗಲ್ಲ ಎಂದಿದ್ದಾರೆ. ಹಣ ನೀಡುತ್ತೇವೆ ಅಕ್ಕಿ ಪೂರೈಸಿ ಎಂದು ಕೇಳಿದೆ. ಆದ್ರೆ ಕೇಂದ್ರ ಸಚಿವ ಗೋಯಲ್ ಹಾರಿಕೆ ಉತ್ತರ ಕೊಟ್ಟಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.


ಎಷ್ಟೇ ಕಷ್ಟವಾದರೂ ಉಚಿತವಾಗಿ 10 ಕೆಜಿ ಅಕ್ಕಿ ಕೊಟ್ಟೇ ಕೊಡುತ್ತೇವೆ. ಅಕ್ಕಿ ಕೊಡಲು ಸ್ವಲ್ಪ ವಿಳಂಬವಾಗಹುದು ಅಷ್ಟೇ. ಏಜೆನ್ಸಿಗಳ ಮೂಲಕ ಅಕ್ಕಿ ಖರೀದಿಸುವ ಪ್ರಯತ್ನ ಮಾಡುತ್ತಿದ್ದೇವೆ. ರಾಜಕೀಯ ಉದ್ದೇಶದಿಂದ ಅಕ್ಕಿ ಪೂರೈಕೆ ಮಾಡುತ್ತಿಲ್ಲ. ಸ್ಟಾಕ್ ಇದ್ದರೂ ಅಕ್ಕಿ ಕೊಡಲ್ಲ ಎನ್ನುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಪ್ರಶ್ನಿಸಿದ್ದಾರೆ.