ಕೇಂದ್ರ ಸಚಿವ ಸ್ಥಾನಕ್ಕೆ ಪಶುಪತಿ ಪರಾಸ್ ರಾಜೀನಾಮೆ

Prasthutha|

ಲೋಕಸಭಾ ಚುನಾವಣೆ ಬೆನ್ನಲ್ಲೇ ಸಚಿವ ಸ್ಥಾನಕ್ಕೆ ಪಶುಪತಿ ಪಾರಸ್ ರಾಜೀನಾಮೆ ನೀಡಿದ್ದಾರೆ.

- Advertisement -

ಕಳೆದ ಚುನಾವಣೆಯಲ್ಲಿ ಆರ್ ಎಲ್ ಜೆಪಿ ಪಕ್ಷದ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿತ್ತು, ಆಗ ಪಶುಪತಿ ಅವರನ್ನು ಕೇಂದ್ರ ಸಚಿವರನ್ನಾಗಿ ಮಾಡಲಾಗಿತ್ತು. ಆದರೆ ಈ ಬಾರಿ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡಿರುವ ಕಾರಣ ಪಶುಪತಿ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ 17 ಸ್ಥಾನಗಳಲ್ಲಿ, ಜೆಡಿಯು 16 ಸ್ಥಾನಗಳಲ್ಲಿ ಹಾಗೂ ಚಿರಾಗ್ ಪಾಸ್ವಾನ್ ಅವರ ಲೋಕ ಜನಶಕ್ತಿ ಪಕ್ಷವು 5 ಕ್ಷೇತ್ರಗಳಲ್ಲಿ, ಜಿತನ್ ಮಾಂಝಿ ಅವರ ಎಚ್ ಎಎಂ 1 ಸ್ಥಾನ ಹಾಗೂ ಉಪೇಂದ್ರ ಕುಶ್ವಾಹಾ ಅವರ ರಾಷ್ಟ್ರೀಯ ಲೋಕ ಜನತಾ ದಳ ಒಂದು ಕ್ಷೇತ್ರದಲ್ಲಿ ಸ್ಪರ್ಧಿಸಲಿದೆ ಎನ್ನುವ ವಿಚಾರ ತಿಳಿದುಬಂದಿದೆ. ಸೀಟು ಹಂಚಿಕೆಯಲ್ಲಿ ಚಿರಾಗ್ ಪಾಸ್ವಾನ್ ಅವರ ಎಲ್ ಜೆಪಿ(ರಾಮ್ ವಿಲಾಸ್) 5 ಲೋಕಸಭಾ ಕ್ಷೇತ್ರಗಳಿಗೆ ಸ್ಪರ್ಧಿಸುವ ಅವಕಾಶ ಪಡೆದಿದ್ದಕ್ಕಾಗಿ ಪಶುಪತಿ ಕೋಪಗೊಂಡಿದ್ದಾರೆ ಎನ್ನಲಾಗಿದೆ. ಸೀಟು ಹಂಚಿಕೆ ಘೋಷಣೆಗೂ ಮುನ್ನ ನಮ್ಮ ಜತೆ ಮಾತನಾಡಿಲ್ಲ ಎಂದು ಪಶುಪತಿ ಪರಾಸ್ ಹೇಳಿದ್ದಾರೆ.



Join Whatsapp