ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಕೇಂದ್ರ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಭೇಟಿ

Prasthutha|

ಬೆಂಗಳೂರು: ಕೇಂದ್ರದ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಜೆ ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಮಾಜಿ ಪ್ರಧಾನಮಂತ್ರಿ~ ಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದರು.

- Advertisement -

ಕೇಂದ್ರ ಸಚಿವರನ್ನು ಮಾಜಿ ಪ್ರಧಾನಿಗಳ ಕುಟುಂಬ ಸದಸ್ಯರು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡಿದ್ಸು, ದೇವೇಗೌಡರ ಆರೋಗ್ಯ ವಿಚಾರಿಸಿದ ನಿರ್ಮಲಾ ಸೀತಾರಾಮನ್, ಕೆಲ ಹೊತ್ತು ಕುಶಲೋಪರಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಉಪಸ್ಥಿತರಿದ್ದರು.

Join Whatsapp