ಲಕ್ನೋ: ದುಬೈನಲ್ಲಿ ಭಾರತ – ಪಾಕಿಸ್ತಾನದ ನಡುವಿನ ಕ್ರಿಕೆಟ್ ಪಂದ್ಯಾಟದಲ್ಲಿ ಪಾಕ್ ಗೆಲುವಿಗಾಗಿ ಸಂಭ್ರಮಿಸಿದ ಹಿನ್ನೆಲೆಯಲ್ಲಿ 7 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, 4 ಮಂದಿಯನ್ನು ಬಂಧಿಸಲಾಗಿದೆ.
ಅಕ್ಟೋಬರ್ 24 ರಂದು ನಡೆದ ಭಾರತ – ಪಾಕಿಸ್ತಾನ ನಡುವಿನ ಟಿ 20 ಪಂದ್ಯಾಟದಲ್ಲಿ ಪಾಕ್ ತಂಡದ ಗೆಲುವಿನ ಸಂಭ್ರಮಿಸಿದ ಏಳು ಮಂದಿಯನ್ನು ಉತ್ತರಪ್ರದೇಶದ 5 ಜಿಲ್ಲೆಗಳಿಂದ ಪೊಲೀಸರು ಬಂಧಿಸಿದ್ದರು.
ಪಾಕಿಸ್ತಾನ ಪರ ಘೋಷಣೆ ಕೂಗಿ ಸಂಭ್ರಮ ಆಚರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ ಸೆಕ್ಷನ್ 505(1), ಐಟಿ ಕಾಯ್ದೆ 66 (ಎಫ್) ಅಡಿಯಲ್ಲಿ ಆಗ್ರಾದಿಂದ ಮೂವರನ್ನು ಬಂಧಿಸಲಾಗಿದೆ. ಮಾತ್ರವಲ್ಲ ಪಾಕಿಸ್ತಾನ ಕ್ರಿಕೆಟ್ ತಂಡವನ್ನು ಬೆಂಬಲಿಸಿ ವಾಟ್ಸಾಪ್ ಸ್ಟೇಟಸ್ ಹಾಕಿದ ಆರೋಪದಲ್ಲಿ ಬರೇಲಿಯಿಂದ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನವನ್ನು ಬೆಂಬಲಿಸಿದಕ್ಕಾಗಿ ಇನ್ನೊಬ್ಬ ವ್ಯಕ್ತಿಯನ್ನು ಲಕ್ನೋದಿಂದ ಬಂಧಿಸಲಾಗಿದ್ದು, ಆತನ ವಿರುದ್ಧ ಐಪಿಸಿ ಸೆಕ್ಷನ್ 151 CRPC ಮತ್ತು 507 IPC ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.