ಭದ್ರತಾ ಕಾಯ್ದೆ ಅಡಿಯಲ್ಲಿ ಬಂಧಿತ ಮುಸ್ಲಿಮ್ ಯುವಕರನ್ನು ಬಿಡುಗಡೆಗೊಳಿಸಿದ ಅಲಹಾಬಾದ್ ಕೋರ್ಟ್

Prasthutha|

ಲಕ್ನೋ: ಉತ್ತರ ಪ್ರದೇಶದ ಮೌ ಜಿಲ್ಲೆಯಲ್ಲಿ ಸಿಎಎ ವಿರೋಧಿ ಪ್ರತಿಭಟನಾ ನಿರತ ಆರು ಮುಸ್ಲಿಮರ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್.ಎಸ್.ಎ ) ಅಡಿಯಲ್ಲಿ ಬಂಧಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನ ವಿಭಾಗೀಯ ಪೀಠ ಈ ಪ್ರಕರಣವನ್ನು ರದ್ದುಗೊಳಿಸಿ ಆರೋಪಿಗಳನ್ನು ಬಿಡುಗಡೆಗೊಳಿಸುವಂತೆ ಆದೇಶ ನೀಡಿದೆ.

- Advertisement -

ಮಾತ್ರವಲ್ಲ ಪ್ರತಿಭಟನಕಾರರ ಮೇಲೆ ರಾಷ್ಟ್ರೀಯ ಭದ್ರತಾ ಕಾಯ್ದೆ ಬಂಧಿಸಿರುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಮೂರ್ತಿಗಳಾದ ಸಾಧನಾ ರಾಣಿ ಮತ್ತು ಸುನಿತಾ ಅಗರ್ವಾಲ್ ಅವರನ್ನೊಳಗೊಂಡ ಪೀಠ ಎನ್.ಎಸ್.ಎ ಹೇರಿಕೆಗೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನು ಒದಗಿಸಲು ಸರ್ಕಾರ ವಿಫಲವಾಗಿದೆ ಎಂದು ತಿಳಿಸಿದೆ.

- Advertisement -

ಡಿಸೆಂಬರ್ 2019 ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ಧದ ಪ್ರತಿಭಟನೆಯ ಆರೋಪದಲ್ಲಿ ಅಮೀರ್ ಶಬ್ಬೀರ್, ಶಹರ್ಯಾರ್, ಅಬ್ದುಲ್ ವಹಾಬ್, ಆಸೀಫ್ ಚಂದನ್, ಅನಸ್ ಮತ್ತು ಫೈಝಾನ್ ಎಂಬವರನ್ನು ರಾಷ್ಟ್ರೀಯ ಭದ್ರತಾ ಕಾಯ್ಡೆಯಡಿಯಲ್ಲಿ ಬಂಧಿಸಲಾಗಿತ್ತು.

ಸದ್ಯ ಈ ಪ್ರಕರಣವನ್ನು ರದ್ದುಗೊಳಿಸಿರುವ ಅಲಹಾಬಾದ್ ಪೀಠ ಬಂಧಿತ ಎಲ್ಲಾ ಆರೋಪಿಗಳನ್ನು ಬಿಡುಗಡೆಗೆ ಆದೇಶಿಸಿದೆ.



Join Whatsapp