ಲಕ್ನೋ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಇದೇ ಮೊದಲ ಬಾರಿಗೆ ಮೈನ್ ಪುರಿ ಜಿಲ್ಲೆಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.
ಸಮಾಜವಾದಿ ಪಕ್ಷದ ಭದ್ರಕೋಟೆಯಾದ ಕರ್ಹಾಲ್ ಕ್ಷೇತ್ರದಲ್ಲಿ 1993 ರ ಬಳಿಕ ಪ್ರತಿ ಚುನಾವಣೆಯಲ್ಲಿ ಮತದಾರರು ಎಸ್ಪಿ ಅಭ್ಯರ್ಥಿಗಳಿಗೆ ಮತ ಹಾಕುತ್ತಲೇ ಬಂದಿದ್ದಾರೆ. 2002 ರಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿಯಾಗಿ ಜಯಗಳಿಸಿತ್ತು.
ಅಖಿಲೇಶ್ ಯಾದವ್ ಅವರ ತಂದೆ, ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಅವರು ಐದು ಬಾರಿ ಸಂಸತ್ತಿದೆ ಆಯ್ಕೆ ಮಾಡಿದ ಮೈನ್ ಪುರಿ ಲೋಕಸಭಾ ಕ್ಷೇತ್ರದ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಕರ್ಹಾಲ್ ಕೂಡ ಒಂದಾಗಿದೆ.