UP: ರಾಜ್ಯಸಭಾ ಚುನಾವಣೆಯಲ್ಲಿ 8 ಸ್ಥಾನಗಳಲ್ಲಿ ಬಿಜೆಪಿ, 2 ಸ್ಥಾನಗಳಲ್ಲಿ ಎಸ್‌ಪಿ ಗೆಲುವು

Prasthutha|

ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ 10 ರಾಜ್ಯಸಭಾ ಸ್ಥಾನಗಳ ಪೈಕಿ ಎಂಟು ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.ಉಳಿದ ಎರಡು ಸ್ಥಾನಗಳನ್ನು ಸಮಾಜವಾದಿ ಪಕ್ಷ ತನ್ನದಾಗಿಸಿಕೊಂಡಿದೆ .

- Advertisement -

ಚುನಾವಣೆಯಲ್ಲಿ ವಿರೋಧ ಪಕ್ಷದ ಅಭ್ಯರ್ಥಿಗಳು ಆಡಳಿತ ಪಕ್ಷಕ್ಕೆ ಅಡ್ಡ ಮತದಾನ ಮಾಡಿದ ಘಟನೆಯೂ ನಡೆದಿದೆ.

ಬಿಜೆಪಿಯ ಎಲ್ಲ 8 ಅಭ್ಯರ್ಥಿಗಳು ಗೆಲ್ಲುತ್ತಾರೆ ಎಂದು ನಾವು ಮೊದಲಿನಿಂದಲೂ ಹೇಳುತ್ತಲೇ ಬಂದಿದ್ದೇವೆ. ನಮ್ಮ 8 ಅಭ್ಯರ್ಥಿಗಳು ಇಂದು ಗೆದ್ದಿದ್ದಾರೆ. ಎಲ್ಲಾ ವಿಜೇತ ಅಭ್ಯರ್ಥಿಗಳನ್ನು ನಾನು ಅಭಿನಂದಿಸುತ್ತೇನೆ. ಯಾರ ಮತಗಳಿಂದ ಅವರು ಗೆದ್ದಿದ್ದಾರೆ ಎಂಬುದಕ್ಕೆ ನಾನು ಜನರಿಗೆ ಧನ್ಯವಾದ ಹೇಳುತ್ತೇನೆ ಎಂದು ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ತಿಳಿಸಿದ್ದಾರೆ.



Join Whatsapp