ಯುಪಿ ಸಿಎಂ ಬೆಂಗಾವಲು ವಾಹನ ಪಲ್ಟಿ: 9 ಮಂದಿ ಗಂಭೀರ

Prasthutha|

ಉತ್ತರಪ್ರದೇಶ: ಯುಪಿ ಮುಖ್ಯಮಂತ್ರಿ ಆದಿತ್ಯನಾಥ್ ಬೆಂಗಾವಲು ವಾಹನ ಶನಿವಾರ ಲಕ್ನೋದಲ್ಲಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ಒಂಬತ್ತು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಸಿಎಂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

- Advertisement -

ಗಾಯಗೊಂಡವರಲ್ಲಿ ಐವರು ಪೊಲೀಸ್ ಸಿಬ್ಬಂದಿ ಸೇರಿದ್ದಾರೆ. ಲಕ್ನೋದ ರಸ್ತೆಯ ಮಧ್ಯೆ ಬಿದ್ದಿದ್ದ ಪ್ರಾಣಿಯ ಮೃತದೇಹಕ್ಕೆ ಡಿಕ್ಕಿ ಹೊಡೆದು ವಾಹನ ಪಲ್ಟಿಯಾಗಿದೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಉತ್ತರ ಪ್ರದೇಶದ ಮಾಜಿ ಸಿಎಂ, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಬಿಡಾಡಿ ಪ್ರಾಣಿಗಳ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸದ ಕಾರಣ ಇಂದು ಸ್ವತಃ ಮುಖ್ಯಮಂತ್ರಿಗಳ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಹಲವಾರು ಮಂದಿ ಗಾಯಗೊಂಡಿರುವುದು ವಿಷಾದಕರ ಹಾಗೂ ಆತಂಕಕಾರಿ ಎಂದು X​ ಮಾಡಿದ್ದಾರೆ



Join Whatsapp