ಲಕ್ನೋ: ಉತ್ತರ ಪ್ರದೇಶದ ಅಲ್ತಾಫ್ ಎಂಬ ಯುವಕನ ಕಸ್ಟಡಿ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತನ ವಿರುದ್ಧದ ಪ್ರಕರಣವನ್ನು ಕೈಬಿಡುವುದಾಗಿ ಉತ್ತರ ಪೊಲೀಸರು ತಿಳಿಸಿದ್ದಾರೆ.
ಅಲ್ತಾಫ್ ನನ್ನು ಈ ಹಿಂದೆ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಸದ್ಯ ಅಪಹರಣಕ್ಕೊಳಗಾದ ಬಾಲಕಿ ಅಪ್ರಾಪ್ತಳಲ್ಲ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಅಲ್ತಾಫ್ ನ ವಿರುದ್ಧದ ಪ್ರಕರಣವನ್ನು ಕೈಬಿಡಲಾಗಿದೆ ಎಂದು ಹೇಳಲಾಗಿದೆ.
ಕಳೆದ ವಾರ ಅಪ್ರಾಪ್ತೆಯ ಅಪಹರಣ ಮತ್ತು ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಅಲ್ತಾಫ್ ನನ್ನು ವಶಕ್ಕೆ ಪಡೆದಿದ್ದರಾದರೂ ನಂತರದ ಬೆಳವಣಿಗೆಯೊಂದರಲ್ಲಿ ಆತನ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಲಾಕಪ್ ನ ಶೌಚಾಲಯದಲ್ಲಿ ಪತ್ತೆಯಾಗಿತ್ತು.
ಕಾಸ್ಗಂಜ್ ರೈಲ್ವೇ ನಿಲ್ದಾಣದಲ್ಲಿ ಪತ್ತೆಯಾದ ಮಹಿಳೆಯನ್ನು ಮ್ಯಾಜಿಸ್ಟ್ರೇಟ್ ಎದುರು ಹಾಜರುಪಡಿಸಿ ಹೇಳಿಕೆ ದಾಖಲಿಸಿಕೊಳ್ಳಲಾಯಿತು ಎಂದು ಪೊಲೀಸ್ ವರಿಷ್ಠಾಧಿಕಾರಿ ಎಂ. ಬೋಟ್ರೆ ರೋಹನ್ ಪ್ರಮೋದ್ ತಿಳಿಸಿದ್ದಾರೆ.