ಲಕ್ನೋ: ಬಕ್ರೀದ್ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸರ್ಕಾರ ಹೊಸ ಕೋವಿಡ್ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಬಕ್ರೀದ್ ಆಚರಣೆಗೆ 50 ಕ್ಕೂ ಹೆಚ್ಚು ಜನರು ಒಂದುಗೂಡುವುದು, ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿಯನ್ನು ಸರ್ಕಾರ ನಿಷೇಧಿಸಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.
ಬಕ್ರೀದ್ ಸಮೀಪಿಸುತ್ತಿದ್ದಂತೆಯೇ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಮುಖ್ಯಮಂತ್ರಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಾನುವಾರು ಮತ್ತು ಒಂಟೆಗಳನ್ನು ಸಾರ್ವಜನಿಕವಾಗಿ ಹತ್ಯೆ ಮಾಡಲು ಅನುಮತಿ ಇಲ್ಲ. ಬಲಿದಾನಕ್ಕಾಗಿ ಸಿದ್ಧಪಡಿಸಿದ ಸ್ಥಳದಲ್ಲಿ ಅಥವಾ ಖಾಸಗಿ ಸ್ಥಳಗಳಲ್ಲಿ ನಡೆಸಬೇಕು. ಬಲಿದಾನದ ನಂತರ ಅದನ್ನು ಸ್ವಚ್ಛಗೊಳಿಸಲು ವಿಶೇಷ ಕಾಳಜಿ ವಹಿಸಬೇಕು ಎಂದು ಸರ್ಕಾರದ ವಕ್ತಾರರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿದ ನಂತರ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದ್ದಾರೆ.