ಉತ್ತರಪ್ರದೇಶದ ಆದಿತ್ಯನಾಥ್ ಸರಕಾರದ ವಿರುದ್ಧ ನಿವೃತ್ತ ಮುಖ್ಯ ನ್ಯಾಯಮೂರ್ತಿ ಗೋವಿಂದ್ ಮಾಥೂರ್ ಆಕ್ರೋಶ ವ್ಯಕ್ತಪಡಿಸಿದ್ದು, “ಉತ್ತರ ಪ್ರದೇಶದ ಕಾರ್ಯಾಂಗವು ನ್ಯಾಯಾಲಯ (ಹೈಕೋರ್ಟ್) ನೀಡುವ ಆದೇಶಗಳನ್ನು ಒಪ್ಪಿಕೊಳ್ಳುತ್ತಿಲ್ಲ” ಎಂದು ಹೇಳಿದ್ದಾರೆ.
ಅಲಹಾಬಾದ್ ಹೈಕೋರ್ಟ್ ಹೊರಡಿಸಿದ ನಿರ್ದೇಶನಗಳನ್ನು ಪಾಲಿಸದಿರಲು ಉತ್ತರಪ್ರದೇಶ ಸರ್ಕಾರಕ್ಕೆ ಸಮಸ್ಯೆ ಏನಿದೆ ಎಂಬುದು ನನಗೆ ಅರ್ಥವಾಗುತ್ತಿಲ್ಲ. ಉತ್ತರ ಪ್ರದೇಶ ಸರ್ಕಾರ ನ್ಯಾಯಾಂಗವನ್ನು ಎದುರಾಳಿ ಎಂದು ಯಾಕೆ ಪರಿಗಣಿಸುತ್ತಿದೆ ಎಂಬುದು ತಿಳಿಯದಾಗಿದೆ. ನ್ಯಾಯಾಂಗವು ರಾಜ್ಯದ ಮತ್ತೊಂದು ಮುಖ. ಉತ್ತರ ಪ್ರದೇಶದ ಐದು ನಗರಗಳಲ್ಲಿ ಲಾಕ್‌ಡೌನ್ ಜಾರಿಗೆ ತರುವಂತೆ ಅಲಾಹಾಬಾದ್ ಹೈಕೋರ್ಟ್ ನೀಡಿದ್ದ ಆದೇಶವು, ನಗರಗಳಲ್ಲಿ ಪ್ರತಿದಿನ ಪರಿಸ್ಥಿತಿ ಹದಗೆಡುತ್ತಿರುವುದನ್ನು ಗುರುತಿಸಿ, ಲಾಕ್‌ಡೌನ್‌ಗೆ ಆದೇಶಿಸಿತ್ತೇ ವಿನಃ ಸುಮ್ಮನೇ ಲಾಕ್‌ಡೌನ್ ಮಾಡುವಂತೆ ಆದೇಶಿಸಿರಲಿಲ್ಲ ಎಂದು ಅವರು ಸಂದರ್ಶನದಲ್ಲಿ ತಿಳಿಸಿದ್ದಾರೆ.