Home ಟಾಪ್ ಸುದ್ದಿಗಳು ಪ್ರಧಾನಿ ಜಾಥಾಗಳಿಗೆ ಉತ್ತರ ಪ್ರದೇಶ ಸರ್ಕಾರ ಸಾರ್ವಜನಿಕರ ಹಣ ಪೋಲು ಮಾಡುತ್ತಿದೆ: ಪ್ರಿಯಾಂಕಾ ಗಂಭೀರ ಆರೋಪ

ಪ್ರಧಾನಿ ಜಾಥಾಗಳಿಗೆ ಉತ್ತರ ಪ್ರದೇಶ ಸರ್ಕಾರ ಸಾರ್ವಜನಿಕರ ಹಣ ಪೋಲು ಮಾಡುತ್ತಿದೆ: ಪ್ರಿಯಾಂಕಾ ಗಂಭೀರ ಆರೋಪ

ಲಕ್ನೋ: ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಜಾಥಾಗಳಿಗೆ ಜನ ಸೇರಿಸಲು ಉತ್ತರ ಪ್ರದೇಶ ಸರ್ಕಾರ ಸಾರ್ವಜನಿಕ ತೆರಿಗೆ ಹಣವನ್ನು ಪೋಲು ಮಾಡುತ್ತಿದೆ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಂಗಳವಾರ ಆರೋಪಿಸಿದ್ದಾರೆ.

ಮಾತ್ರವಲ್ಲ ಬಿಜೆಪಿಯ ಹೊಲಸು ರಾಜಕೀಯವನ್ನು ದೇಶದ ಪ್ರತಿಯೊಬ್ಬ ನಾಗರಿಕರು ಕೂಡ ಅರ್ಥಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

ಬಿಜೆಪಿ ಜಾಥಾಗಳಿಗೆ ಜನರನ್ನು ಸೇರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟ್ವಿಟ್ಟರ್ ನಲ್ಲಿ ಮಾಧ್ಯಮದ ವರದಿಗಳಗಳನ್ನು ಹಂಚಿಕೊಂಡಿದ್ದಾರೆ.

ಈ ಮಧ್ಯೆ ಲಾಕ್ ಡೌನ್ ವೇಳೆಯಲ್ಲಿ ಲಕ್ಷಾಂತರ ಕಾರ್ಮಿಕರು ದೆಹಲಿಯಿಂದ ಉತ್ತರ ಪ್ರದೇಶದ ತಮ್ಮ ಹಳ್ಳಿಗಳಿಗೆ ಕಾಲ್ನಡಿಗೆಯಲ್ಲಿ ಹಿಂದಿರುಗುತ್ತಿದ್ದಾಗ, ಬಿಜೆಪಿ ಸರ್ಕಾರ ಬಸ್ ಗಳ ವ್ಯವಸ್ಥೆಗೊಳಿಸಿರಲಿಲ್ಲ ಎಂದು ಪ್ರಿಯಾಂಕಾ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.

ಉತ್ತರ ಪ್ರದೇಶದ ಪ್ರತಿ ಹಳ್ಳಿಯಲ್ಲೂ ಬಿಜೆಪಿಯ ಬಗ್ಗೆ ಜನರಿಗೆ ತೀವ್ರ ಅಸಮಾಧಾನವಿದೆ ಎಂದು ಪ್ರಿಯಾಂಕಾ ಮಾರ್ಮಿಕ ನುಡಿದರು.

Join Whatsapp
Exit mobile version