ಲಕ್ನೋ: ವಿಶ್ವಕಪ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿರುವ ವೇಗಿ ಮೊಹಮ್ಮದ್ ಶಮಿ ಅವರ ಗ್ರಾಮದಲ್ಲೇ ಸಣ್ಣ ಕ್ರೀಡಾಂಗಣ ನಿರ್ಮಾಣಕ್ಕೆ ಉತ್ತರ ಪ್ರದೇಶ ಸರ್ಕಾರ ಮುಂದಾಗಿದೆ.
ಉತ್ತರ ಪ್ರದೇಶದ ಅಮ್ರೋಹಾ ಜಿಲ್ಲೆಯ ಸಹಾಸ್ಪುರ ಗ್ರಾಮದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದ್ದು, ಈಗಾಗಲೇ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಶೀಘ್ರದಲ್ಲೇ ಕ್ರೀಡಾಂಗಣದ ಕಾಮಗಾರಿ ಆರಂಭಿಸುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದಾರೆ