ಹಿರಿಯ ನ್ಯಾಯಾಧೀಶರಿಂದ ಲೈಂಗಿಕ ಕಿರುಕುಳ ಆರೋಪ: ಸಿಜೆಐಗೆ ಪತ್ರ ಬರೆದ ಯುಪಿ ನ್ಯಾಯಾಧೀಶೆ

Prasthutha|

ನವದೆಹಲಿ: ಉತ್ತರ ಪ್ರದೇಶದ ಮಹಿಳಾ ನ್ಯಾಯಾಧೀಶೆಯೊಬ್ಬರು ತಮಗೆ ಹಿರಿಯ ನ್ಯಾಯಾಧೀಶರಿಂದ ಲೈಂಗಿಕ ಕಿರುಕುಳವಾಗುತ್ತಿದೆ, ಆತ್ಮಹತ್ಯೆಗೆ ಅವಕಾಶ ನೀಡಿ ಎಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ನನ್ನ ಜೀವನ ಕೊನೆಗೊಳಿಸಲು ದಯವಿಟ್ಟು ನನಗೆ ಅನುಮತಿ ಕೊಡಿ ಎಂದು ಮಹಿಳಾ ನ್ಯಾಯಾಧೀಶೆ ಪತ್ರ ಬರೆದು ಮುಖ್ಯ ನ್ಯಾಯಮೂರ್ತಿಗೆ ಮನವಿ ಮಾಡಿದ್ದಾರೆ. ಜಿಲ್ಲಾ ನ್ಯಾಯಾಧೀಶರು ಮತ್ತು ಅವರ ಸಹಚರರು ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ನನಗೆ ಲೈಂಗಿಕ ಕಿರುಕುಳ ನೀಡಲಾಗಿದೆ. ನನ್ನನ್ನು ಕಸದಂತೆ ನಡೆಸಿಕೊಳ್ಳಲಾಗಿದೆ. ನಾನು ಬೇಡದ ಕೀಟದಂತೆ ಭಾವಿಸುತ್ತೇನೆ ಎಂದು ಪತ್ರದಲ್ಲಿ ತಮ್ಮ ನೋವು ತೋಡಿಕೊಂಡಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಪ್ರಕರಣ ಸಂಬಂಧ ವರದಿ ಕೇಳಿದ್ದಾರೆ.

ಮುಖ್ಯ ನ್ಯಾಯಮೂರ್ತಿ ಸೂಚನೆ ಮೇರೆಗೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಅತುಲ್ ಎಂ. ಕುರ್ಹೇಕರ್ ಅವರು ಅಲಹಾಬಾದ್ ಹೈಕೋರ್ಟ್ನ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದು ಮಹಿಳಾ ನ್ಯಾಯಾಧೀಶರ ಎಲ್ಲಾ ದೂರುಗಳ ಸ್ಥಿತಿಯ ಕುರಿತು ಇಂದು ಬೆಳಗ್ಗೆ ವರದಿಯನ್ನು ಕೇಳಿದ್ದಾರೆ.



Join Whatsapp