ಸರ್ಕಾರಿ ಶಾಲೆಗಳಲ್ಲಿ ಕರಾಟೆ ತರಬೇತಿಯನ್ನು ಕಡ್ಡಾಯಗೊಳಿಸಿದ ಯುಪಿ

Prasthutha|

ಲಕ್ನೋ: ಉತ್ತರ ಪ್ರದೇಶದ ಸರ್ಕಾರವು ಬಾಲಕಿಯರ ಸುರಕ್ಷತೆ ಮತ್ತು ಯೋಗಕ್ಷೇಮವನ್ನು ಖಾತ್ರಿಪಡಿಸುವ ಉದ್ದೇಶದಿಂದ ಮತ್ತು ಮಿಷನ್ ಶಕ್ತಿ ಹಂತ 4 ರ ಅಡಿಯಲ್ಲಿ ಅವರ ದೈಹಿಕ ಮತ್ತು ಮಾನಸಿಕ ಸ್ವಾವಲಂಬನೆಯನ್ನು ಬಲಪಡಿಸುವ ಉದ್ದೇಶದಿಂದ ಹಿರಿಯ ಪ್ರಾಥಮಿಕ ಮತ್ತು ಸಂಯೋಜಿತ ಶಾಲೆಗಳಲ್ಲಿ ಸ್ವಯಂ ರಕ್ಷಣಾ ತರಬೇತಿಯನ್ನು ಕಡ್ಡಾಯಗೊಳಿಸಿ ಆದೇಶ ನೀಡಿದೆ.

- Advertisement -

ಈ ಹಿಂದೆ 2014-15 ರಲ್ಲಿ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿಯಾಗಿದ್ದಾಗ, ಬಾಲಕಿಯರು ಮತ್ತು ಮಹಿಳೆಯರ ವಿರುದ್ಧದ ಅಪರಾಧಗಳ ಹೆಚ್ಚಳವನ್ನು ಗಮನಿಸಿ ಹಿರಿಯ ಪ್ರಾಥಮಿಕ ಮತ್ತು ಸಂಯೋಜಿತ ಶಾಲೆಗಳಲ್ಲಿ ಸ್ವಯಂ ರಕ್ಷಣಾ ತರಬೇತಿಯನ್ನು ನೀಡುವಂತೆ ಶಿಕ್ಷಣ ಇಲಾಖೆಗೆ ಈ ಸೂಚನೆಗಳನ್ನು ನೀಡಿದ್ದರು.

ಇದೀಗ ಮಹಿಳೆಯರ ಮೇಲಿನ ಹಿಂಸಾಚಾರ ಮತ್ತು ಅಪರಾಧಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆ ಯುಪಿ ಸರ್ಕಾರ ಹೊಸ ನಿರ್ಧಾರ ತಂದಿದೆ. ಲೈಂಗಿಕ ಕಿರುಕುಳ, ಬಾಲಕಿಯ ಅಪಹರಣ ಮಾಡುವ ಘಟನೆಗಳನ್ನು ಗಮನದಲ್ಲಿಟ್ಟುಕೊಂಡು ಹುಡುಗಿಯರಿಗೆ ತರಬೇತಿಯನ್ನು ನೀಡಲಾಗುವುದು ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.



Join Whatsapp