ಲಖನೌ: ಪ್ರವಾದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿಯ ಮಾಜಿ ವಕ್ತಾರೆ ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬರನ್ನು ಗುರುವಾರ ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.
ನೂಪುರ್ ಶರ್ಮಾ ಅವರ ಶಿರಚ್ಛೇದ ಮಾಡುವುದಾಗಿ ಬೆದರಿಕೆ ಹಾಕಿರುವ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿದ ವ್ಯಕ್ತಿಯನ್ನು ಕಲವೇ ಗಂಟೆಗಳಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಸೀರ್ ಹುಸೇನ್ ಎಂಬಾತನನ್ನು ಸಾಮಾಜಿಕ ಜಾಲತಾಣಗಳಲ್ಲಿ ಬೆದರಿಕೆ ಹಾಕಿದ ಮತ್ತು ಕೋಮು ಉದ್ವಿಗ್ನತೆ ಸೃಷ್ಟಿಸಿದ ಆರೋಪದಲ್ಲಿ ಫರೀದ್’ಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕಸ್ಸಾವಾನ್ ಎಂಬಲ್ಲಿನ ಆತನ ಮನೆಯಿಂದ ಬಂಧಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ರಾಜ್’ಕುಮಾರ್ ಅಗರ್ವಾಲ್ ತಿಳಿಸಿದ್ದಾರೆ.