ಲಖಿಂಪುರ ಹಿಂಸಾಚಾರ | ಭೇಟಿಗೆ ತೆರಳಿದ ಪ್ರಿಯಾಂಕಾ ಗಾಂಧಿಯನ್ನು ಬಂಧಿಸಿದ ಉ.ಪ್ರದೇಶ ಪೊಲೀಸರು

Prasthutha|

ಉತ್ತರ ಪ್ರದೇಶ: ಲಖಿಂಪುರ ರೈತರ ವಿರುದ್ಧ ನಡೆಸಿದ ಹಿಂಸಾಚಾರಕ್ಕೆ ಸಂಬಂಧಿಸಿ ಲಖಿಂಪುರ ಖೇರಿಗೆ ತೆರಳುತ್ತಿದ್ದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಉತ್ತರ ಪ್ರದೇಶದ ಸೀತಾಪುರದ ಹರಗಾಂವ್ ಬಳಿ ಇಂದು ಮುಂಜಾನೆ 5:30ರ ಸುಮಾರಿಗೆ ಯೂಪಿ ಪೊಲೀಸರು ವಶಕ್ಕೆ ಪಡೆದಿದ್ದು, ಲಖಿಂಪುರ ಖೇರಿಗೆ ಪ್ರವೇಶಿಸಿದಂತೆ ತಡೆ ಹಿಡಿದಿದ್ದಾರೆ.

- Advertisement -

ಬಂಧನದ ಬಗ್ಗೆ ಮಾಹಿತಿ ನೀಡಿರುವ ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ದೇಶದಲ್ಲಿ ಏನಾಗುತ್ತಿದೆ, ಯಾವುದೇ ವಾರಂಟ್ ಇಲ್ಲದೇ ಝೆಡ್ + ಭದ್ರತೆ ಹೊಂದಿರುವ ನಾಯಕಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಪ್ರಿಯಾಂಕ ಗಾಂಧಿ ಪೊಲೀಸರೊಂದಿಗೆ ಮಾತನಾಡುವ ವಿಡಿಯೋ ಒಂದನ್ನು ಟ್ವೀಟ್ ಮಾಡಿ ಆಕ್ರೊಶ ಹೊರಹಾಕಿದ್ದಾರೆ.

ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಭೇಟಿಯ ವಿರುದ್ಧ ರೈತರು ನಡೆಸಿದ ಪ್ರತಿಭಟನೆಯ ವೇಳೆ ಉಂಟಾದ ಹಿಂಸಾಚಾರದಲ್ಲಿ 8 ಮಂದಿ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಭೇಟಿಗೆ ತರೆಳಿದ್ದು ಪೊಲೀಸರು ಬಂಧಿಸಿದ್ದಾರೆ.

Join Whatsapp
Exit mobile version