ಲುಲು ಮಾಲ್’ನಲ್ಲಿ ನಮಾಝ್ ನಿರ್ವಹಿಸಿದ ಮುಸ್ಲಿಮರ ವಿರುದ್ಧ ಪ್ರಕರಣ ದಾಖಲು

Prasthutha|

ಲಖನೌ: ನಗರದಲ್ಲಿ ನೂತನವಾಗಿ ಪ್ರಾರಂಭಿಸಿದ ಲುಲು ಮಾಲ್’ನಲ್ಲಿ ನಮಾಝ್ ನಿರ್ವಹಿಸಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಲಖನೌ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಲುಲು ಮಾಲ್’ನ ಸಾರ್ವಜನಿಕ ಸಂಪರ್ಕ ವ್ಯವಸ್ಥಾಪಕ ಸಿಬ್’ಸ್ಟೈನ್ ಹುಸೇನ್ ಅವರು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮುಸ್ಲಿಮ್ ಯುವಕರು ಮಾಲ್’ನಲ್ಲಿ ನಮಾಝ್ ನಿರ್ವಹಿಸುವ ವೀಡಿಯೋವನ್ನು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

- Advertisement -

ಘಟನೆಗೆ ಸಂಬಂಧಿಸಿದಂತೆ ಉತ್ತರ ಪೊಲೀಸರು ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 153 ಎ, 295 ಎ, 341, 505 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Join Whatsapp