Home ಟಾಪ್ ಸುದ್ದಿಗಳು ಲುಲು ಮಾಲ್’ನಲ್ಲಿ ನಮಾಝ್ ನಿರ್ವಹಿಸಿದ ಮುಸ್ಲಿಮರ ವಿರುದ್ಧ ಪ್ರಕರಣ ದಾಖಲು

ಲುಲು ಮಾಲ್’ನಲ್ಲಿ ನಮಾಝ್ ನಿರ್ವಹಿಸಿದ ಮುಸ್ಲಿಮರ ವಿರುದ್ಧ ಪ್ರಕರಣ ದಾಖಲು

ಲಖನೌ: ನಗರದಲ್ಲಿ ನೂತನವಾಗಿ ಪ್ರಾರಂಭಿಸಿದ ಲುಲು ಮಾಲ್’ನಲ್ಲಿ ನಮಾಝ್ ನಿರ್ವಹಿಸಿದ ಅಪರಿಚಿತ ವ್ಯಕ್ತಿಗಳ ವಿರುದ್ಧ ಲಖನೌ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಲುಲು ಮಾಲ್’ನ ಸಾರ್ವಜನಿಕ ಸಂಪರ್ಕ ವ್ಯವಸ್ಥಾಪಕ ಸಿಬ್’ಸ್ಟೈನ್ ಹುಸೇನ್ ಅವರು ಸುಶಾಂತ್ ಗಾಲ್ಫ್ ಸಿಟಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಮುಸ್ಲಿಮ್ ಯುವಕರು ಮಾಲ್’ನಲ್ಲಿ ನಮಾಝ್ ನಿರ್ವಹಿಸುವ ವೀಡಿಯೋವನ್ನು ಹಿಂದುತ್ವ ಸಂಘಟನೆಯ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ.

ಘಟನೆಗೆ ಸಂಬಂಧಿಸಿದಂತೆ ಉತ್ತರ ಪೊಲೀಸರು ಅಪರಿಚಿತರ ವಿರುದ್ಧ ಐಪಿಸಿ ಸೆಕ್ಷನ್ 153 ಎ, 295 ಎ, 341, 505 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

Join Whatsapp
Exit mobile version