ಪ್ರಿಯಾಂಕಾ ಜೊತೆ ಸೆಲ್ಫಿ ತೆಗೆದುಕೊಂಡ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲು ಉ.ಪ್ರ ಸರ್ಕಾರ ಆದೇಶ

Prasthutha|

ಲಕ್ನೋ: ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಜೊತೆ ಸೆಲ್ಫಿ ತೆಗೆದುಕೊಂಡ ಮಹಿಳಾ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳುವಂತೆ ಉತ್ತರ ಪ್ರದೇಶ ಸರ್ಕಾರ ಆದೇಶಿಸಿದೆ ಎಂದು ವರದಿಯಾಗಿದೆ.

- Advertisement -

ಆಗ್ರಾದಲ್ಲಿ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಸ್ವಚ್ಛತಾ ಕೆಲಸಗಾರನ ಕುಟುಂಬವನ್ನು ಭೇಟಿ ಮಾಡಲು ಆಗಮಿಸಿದ ಪ್ರಿಯಾಂಕಾ ಗಾಂಧಿಯನ್ನು ಲಕ್ನೋ-ಆಗ್ರಾ ಎಕ್ಸ್ಪ್ರೆಸ್ ಹೆದ್ದಾರಿಯ ಟೋಲ್ ಪ್ಲಾಜಾದಲ್ಲಿ ಉತ್ತರಪ್ರದೇಶ ಪೊಲೀಸರು ತಡೆದಿದ್ದರು. ಈ ವೇಳೆ ಕೆಲವು ಮಹಿಳಾ ಪೊಲೀಸರು ಪ್ರಿಯಾಂಕಾ ಜೊತೆ ಸೆಲ್ಫಿ ತೆಗೆದುಕೊಂಡಿದ್ದರು.

ಮಹಿಳಾ ಪೊಲೀಸರು ಪ್ರಿಯಾಂಕಾ ಜೊತೆ ಸೆಲ್ಫಿ ತೆಗೆದುಕೊಂಡ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸ್ವತಃ ಪ್ರಿಯಾಂಕಾ ಚಿತ್ರವನ್ನು ಟ್ವೀಟ್ ಮಾಡಿದ್ದರು. ಈ ಕುರಿತು ಲಕ್ನೋ ಪೊಲೀಸ್ ಆಯುಕ್ತ ಡಿ.ಕೆ. ಠಾಕೂರ್ ಸೆಲ್ಫಿ ತೆಗೆದುಕೊಂಡ ಮಹಿಳಾ ಪೊಲೀಸರ ವಿರುದ್ಧ ಆದೇಶ ನೀಡಿದ್ದಾರೆ ಎಂದು ವರದಿಯಾಗಿದೆ.

Join Whatsapp