ಲಕ್ನೋ: ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಗಳಾದ ಮುಹಮ್ಮದ್ ಆಝಂ ಖಾನ್ ಮತ್ತು ನಹಿದ್ ಹಸನ್ ಜೈಲಿನಿಂದಲೇ ಸ್ಪರ್ಧಿಸಲಿದ್ದಾರೆ.
ಈ ಇಬ್ಬರು ಅಭ್ಯರ್ಥಿಗಳನ್ನು ರಾಂಪುರ ಕ್ಷೇತ್ರದಿಂದ ಕಣಕ್ಕಿಳಿಸಲಿದೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿವೆ. ಸದ್ಯ ಆಝಂ ಖಾನ್ ಅವರು ಕಳೆದ ಫೆಬ್ರವರಿಯಿಂದ ವಿವಿಧ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿದ್ದಾರೆ.
ಈ ಮಧ್ಯೆ ಅವರ ಪತ್ನಿ ತಂಝೀನ್ ಫಾತಿಮಾ ಮತ್ತು ಪುತ್ರ ಅಬ್ದುಲ್ಲಾ ಆಝಂ ರಾಂಪುರದಲ್ಲಿ ಪ್ರಚಾರ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಸ್ವತಃ ಅಭ್ಯರ್ಥಿಯಾಗಿರುವ ಅಬ್ದುಲ್ಲಾ ಆಝಂ ಅವರು ಸುವಾರ್ ಕ್ಷೇತ್ರದಿಂದ ಸ್ಪರ್ಧೆ ನಡೆಸಲಿದ್ದು, ಇತ್ತೀಚೆಗೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.