ಲಕ್ನೋ: ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ, ಮುಂಬರುವ ನಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಸುಳಿವನ್ನು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಬೇರೆ ಮುಖವನ್ನು ನೋಡುತ್ತೀರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರಿಯಾಂಕಾ ಈ ಮೇಲಿನಂತೆ ಪ್ರತಿಕ್ರಿಯಿಸಿದರು.
ಉತ್ತರ ಪ್ರದೇಶ ಚುನಾವಣೆಗೆ ಕಾಂಗ್ರೆಸ್ ನ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆಗೊಳಿಸಿದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ, ಕಾಂಗ್ರೆಸ್ ನಿಂದ ಮಾತ್ರ ರಾಜ್ಯದ ಯುವ ಜನತೆಗೆ ಹೊಸ ದೃಷ್ಟಿಕೋನವನ್ನು ಒದಗಿಸಲು ಸಾಧ್ಯ ಎಂದು ತಿಳಿಸಿದರು.
ಮುಂಬರುವ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಈಗಾಗಲೇ 166 ಅಭ್ಯರ್ಥಿಗಳನ್ನು ಘೋಷಿಸಿದ್ದು, ಫೆಬ್ರವರಿ 10 ರಿಂದ ಮಾರ್ಚ್ 7 ರವರೆಗೆ ಏಳು ಹಂತದಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.