ಜಾತಿ ನಿಂದನೆ : 2ನೇ FIR ರದ್ದು ಕೋರಿ ಹೈಕೋರ್ಟ್ ಮೊರೆ ಹೋದ ಉಪೇಂದ್ರ

Prasthutha|

ಬೆಂಗಳೂರು: ಜಾತಿ ನಿಂದನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ತನ್ನ ವಿರುದ್ಧ ದಾಖಲಾಗಿರುವ 2ನೇ FIR ರದ್ದು ಮಾಡುವಂತೆ ಕೋರಿ ನಟ ಉಪೇಂದ್ರ ಹೈಕೋರ್ಟ್ ಮೊರೆ ಹೋಗಿದ್ದಾರೆ.

- Advertisement -

ಪ್ರಕರಣ ಸಂಬಂಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಉಪೇಂದ್ರ ವಿರುದ್ಧ 2ನೇ FIR ದಾಖಲಾಗಿದೆ.

ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮೊದಲ FIR ರದ್ದು ಕೋರಿ ಹೈಕೋರ್ಟ್ ಗೆ ಉಪೇಂದ್ರ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದ್ದ ಹೈಕೋರ್ಟ್ ನ್ಯಾಯಮೂರ್ತಿ ಹೇಮಂತ್ ಚಂದನ ಗೌಡರ್ ಅವರಿದ್ದ ನ್ಯಾಯಪೀಠ FIR ಗೆ ಮಧ್ಯಂತರ ತಡೆ ನೀಡಿತ್ತು.

- Advertisement -

ಹಲಸೂರು ಗೇಟ್‌ ಪೊಲೀಸ್ ಠಾಣೆಯಲ್ಲಿ ಹರೀಶ್ ಎಂಬವರು ಉಪೇಂದ್ರ ವಿರುದ್ಧ ಎರಡನೇ ಪ್ರಕರಣ ದಾಖಲಿಸಿದ್ದು, 2ನೇ FIR ರದ್ದು ಕೋರಿ ನಟ ಹೈಕೋರ್ಟ್ ಮೊರೆ ಹೋಗಿದ್ದಾರೆ. ಈ ಕುರಿತು ಇಂದು ಹೈಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ನಡೆಯಲಿದೆ.

ನಟ ಉಪೇಂದ್ರ ‘ಊರು ಎಂದ ಮೇಲೆ ಹೊಲಗೇರಿ ಇರುತ್ತದೆ’ ಎಂಬ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಉಪೇಂದ್ರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.

Join Whatsapp