ಬೆಂಗಳೂರು: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಿ, ಇಂಜಿನಿಯರಿಂಗ್ ಸೀಟುಗಳಿಗೆ ಬೇಡಿಕೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.
ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಲಿಂಗೇಶ್ ಕೆ.ಎಸ್. ಪ್ರಶ್ನೆಗೆ ಉತ್ತರಿಸಿದ ಸಚಿವರು, ಈಗಾಗಲೇ ರಾಜ್ಯದಲ್ಲಿ 16 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಿದ್ದು, 3 ಸಾವಿರದ 670 ಸೀಟುಗಳು ಲಭ್ಯವಿವೆ. ಆದರೆ ಭರ್ತಿಯಾಗುತ್ತಿರುವುದು 2 ಸಾವಿರದ 086 ಸೀಟುಗಳು ಮಾತ್ರ ಹೀಗಾಗಿ ಸರ್ಕಾರಿ ಕಾಲೇಜುಗಳನ್ನು ಬಲವರ್ಧನೆ ಮಾಡುವ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲು ಒತ್ತು ನೀಡಲಾಗುವುದು ಜೊತೆಗೆ ಖಾಸಗಿ ಕಂಪನಿಗಳೊಂದಿಗೆ ಸರ್ಕಾರಿ ಕಾಲೇಜುಗಳ ಸಹಭಾಗಿತ್ವಕ್ಕೂ ಒತ್ತು ನೀಡಲಾಗುವುದು ಎಂದು ಹೇಳಿದರು.
ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ಒಂದು ಆಸ್ಪತ್ರೆಗೆ ಅನುದಾನ ದೊರೆಯಲು ಅವಕಾಶವಿಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ಸಿ.ಎನ್. ಬಾಲಕೃಷ್ಣ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಸಚಿವರು, ತಾಯಿ ಮಗು ಆಸ್ಪತ್ರೆ ನಿರ್ಮಾಣ ಮಾಡಲು ಕೇಂದ್ರದ ಅನುದಾನ ಮಾತ್ರ ದೊರೆಯುತ್ತದೆ. ರಾಜ್ಯ ವಲಯದಲ್ಲಿ ಅನುದಾನ ದೊರೆಯುವುದಿಲ್ಲ. ಇದಕ್ಕಾಗಿ
ಕೇಂದ್ರ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಹೊರಡಿಸಿದ್ದು, ಶೇಕಡಾ 70ರಷ್ಟು ಹಾಸಿಗೆ ಹೆರಿಗೆ ಉದ್ದೇಶಕ್ಕೆ ಮೀಸಲಿಡಬೇಕಾಗುತ್ತದೆ. ಈ ಬೇಡಿಕೆ ಕಾನೂನಿನಡಿ ಜಾರಿಗೊಳಿಸಲು ಸಾಧ್ಯವಾದರೆ ಪರಿಶೀಲಿಸುವುದಾಗಿ ತಿಳಿಸಿದರು.
ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಿ ಇಂಜಿನಿಯರಿಂಗ್ ಸೀಟುಗಳ ಹೆಚ್ಚಳ: ಡಾ.ಸಿ.ಎನ್. ಅಶ್ವತ್ಥನಾರಾಯಣ
Prasthutha|