ಆಲ್ದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಿ: ಜಿಲ್ಲಾಧಿಕಾರಿಗೆ ಎಸ್‌ಡಿಪಿಐ ಮನವಿ

Prasthutha|

- Advertisement -

ಮೂಡಿಗೆರೆ: ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಆಲ್ದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಿ ಶಾಶ್ವತ ವೈದ್ಯರನ್ನು ನೇಮಿಸುವ ಕುರಿತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಸಹಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಎಸ್ ಡಿಪಿಐ ಮನವಿ ಮಾಡಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಎಸ್ ಡಿಪಿಐ ಮುಖಂಡ ಅಪ್ಸರ್ ಕೊಡ್ಲಿಪೇಟೆ, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರೇ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಆಲ್ದೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೆ ಏರಿಸಿ ಶಾಶ್ವತ ವೈದ್ಯರನ್ನು ನೇಮಿಸುವ ಬಗ್ಗೆ ಎಸ್ ಡಿಪಿಐ ಪಕ್ಷದ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಸಾರ್ವಜನಿಕರ ಪರವಾಗಿ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿ ಮೂರು ತಿಂಗಳುಗಳು ಕಳೆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ಇಂದು ಈ ವಿಚಾರವಾಗಿ ಚಿಕ್ಕಮಗಳೂರು ಜಿಲ್ಲಾಧಿಕಾರಿಗಳ ಸಹಿತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಮನವಿ ಪತ್ರವನ್ನು ಸಲ್ಲಿಸಲಾಗಿದೆ.

- Advertisement -


ಸಾರ್ವಜನಿಕರು ಮತ್ತು ರೋಗಿಗಳಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಆದಷ್ಟು ಬೇಗ ಇದರ ಬಗ್ಗೆ ಗಮನಹರಿಸಿ ಕ್ರಮ ವಹಿಸ ಬೇಕಾಗಿ ವಿನಂತಿ ಎಂದು ಹೇಳಿದ್ದಾರೆ.



Join Whatsapp