Home ಟಾಪ್ ಸುದ್ದಿಗಳು ಉಪ್ಪಳ ಗೇಟ್ | ಖಾಸಗಿ ಬಸ್ ಗೆ ಕಂಟೈನರ್ ಡಿಕ್ಕಿ: ನಾಲ್ವರಿಗೆ ಗಾಯ

ಉಪ್ಪಳ ಗೇಟ್ | ಖಾಸಗಿ ಬಸ್ ಗೆ ಕಂಟೈನರ್ ಡಿಕ್ಕಿ: ನಾಲ್ವರಿಗೆ ಗಾಯ

ಉಪ್ಪಳ: ಖಾಸಗಿ ಬಸ್ ಮತ್ತು ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಗೇಟ್ ಬಳಿ ನಡೆದಿದೆ.

ಪ್ರಯಾಣಿಕರನ್ನು ಇಳಿಸಲು ರಸ್ತೆ ಬದಿ ನಿಲ್ಲಿಸಿದ್ದ ಬಸ್ಸನ್ನು ಹಿಂದಿಕ್ಕುವ ರಭಸದಲ್ಲಿ ಕಂಟೈನರ್ ಲಾರಿಯೊಂದು ಮುಂದೆ ಬರುತ್ತಿದ್ದ ಇನ್ನೊಂದು ಬಸ್ಸಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ತಲಪಾಡಿ ಯಿಂದ ಕಾಸರಗೋಡಿಗೆ ಹಾಗೂ ಲಾರಿ ಮಂಗಳೂರು ಕಡೆಗೆ ತೆರಳುತ್ತಿತ್ತು.


ಬಸ್ಸು ಚಾಲಕ ಉಪ್ಪಳದ ಅಶ್ರಫ್ ಹಾಗೂ ನಾಲ್ವರು ಪ್ರಯಾಣಿಕರು ಗಾಯ ಗೊಂಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಮಂಜೇಶ್ವರ ಠಾಣಾ ಪೊಲೀಸರು ಸಂಚಾರ ಸುಗಮ ಗೊಳಿಸಿದರು.

Join Whatsapp
Exit mobile version