ಮೇಲ್ಮನೆ ಚುನಾವಣೆ: ಶಿಕ್ಷಕ, ಪದವೀಧರ ಕ್ಷೇತ್ರದ ಫಲಿತಾಂಶ ಇಂದು ಪ್ರಕಟ

Prasthutha|

ಬೆಂಗಳೂರು: ಮೇಲ್ಮನೆಯ ಮೂರು ಶಿಕ್ಷಕರ ಹಾಗೂ ಮೂರು ಪದವೀಧರ ಕ್ಷೇತ್ರಗಳ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ನಡೆಯಲಿದೆ.

- Advertisement -

ಬೆಳಗ್ಗೆ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಚುನಾವಣಾ ಕಣದಲ್ಲಿ ಒಟ್ಟು 78 ಅಭ್ಯರ್ಥಿಗಳಿದ್ದು, ಇಂದು ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಮತ ಎಣಿಕೆ ಕೇಂದ್ರಗಳ ಸುತ್ತ ಬಿಗಿ ಪೊಲೀಸ್‌ ಬಂದೋಬಸ್ತ್‌ ಕಲ್ಪಿಸಲಾಗಿದೆ. ಈಶಾನ್ಯ ಪದವೀಧರರ, ಬೆಂಗಳೂರು ಪದವೀಧರ, ನೈಋತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ, ಆಗ್ನೇಯ ಶಿಕ್ಷಕರ ಕ್ಷೇತ್ರಗಳ ಮತ ಎಣಿಕೆ ನಡೆಯಲಿದೆ.



Join Whatsapp