ಉಪ್ಪಿನಂಗಡಿ: ಲಾರಿ ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ಡಿಕ್ಕಿ: ಇಬ್ಬರು ಸ್ಥಳದಲ್ಲಿ ಸಾವು, ಮತ್ತೋರ್ವ ಗಂಭಿರ

Prasthutha|

ಉಪ್ಪಿನಂಗಡಿ: ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಯೊಂದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೂವರು ಮೆಕ್ಯಾನಿಕ್  ಗಳಲ್ಲಿ ಇಬ್ಬರು ಮೃತಪಟ್ಟು ಮತ್ತೋರ್ವ ಗಂಭೀರ ಗಾಯ ಗೊಂಡ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿ ಎಂಬಲ್ಲಿ  ಸಂಭವಿಸಿದೆ.

 ಆಂಧ್ರಪ್ರದೇಶ ಮೂಲದ ಲಾರಿಯೊಂದು ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು , ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ  ಎಂದು ತಿಳಿದು ಬಂದಿದೆ. ಮೃತರನ್ನು ಆಂಧ್ರಪ್ರದೇಶ ಮೂಲದವರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -