ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ ಪಲ್ಟಿಯಾದ ಘಟನೆ ನೀರಕಟ್ಟೆ ಬಳಿ ನಡೆದಿದೆ.
‘ಭಾರತಿ’ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಉಪ್ಪಿನಂಗಡಿಯ ನೀರಕಟ್ಟೆ ಬಳಿ ತಲುಪಿದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿದೆ. ಇದರಿಂದ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.