ಉಪ್ಪಿನಂಗಡಿ: ಬಟ್ಟೆ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ, ಅಪಾರ ಹಾನಿ

Prasthutha|

ಉಪ್ಪಿನಂಗಡಿ: ಇಲ್ಲಿನ ಬಟ್ಟೆ ಅಂಗಡಿಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಅಪಾರ ಬೆಳೆಬಾಳುವ ಬಟ್ಟೆಬರೆಗಳು ಬೆಂಕಿಗಾಹುತಿಯಾಗಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.

- Advertisement -

  ಉಪ್ಪಿನಂಗಡಿಯಲ್ಲಿರುವ ವಿವಾ ಫ್ಯಾಶನ್ ಮಳಿಗೆಗೆ ಆಕಸ್ಮಿಕವಾಗ ಬೆಂಕಿ ಬಿದ್ದಿದೆ. ದಟ್ಟ ಹೊಗೆ ಆವರಿಸಿದ್ದು, ಅಗ್ನಿಶಾಮಕ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಿದ್ದಾರೆ.

ಬಹು ಮಹಡಿ ಕಟ್ಟಡದ ಒಂದು ಮತ್ತು ಎರಡನೇ ಮಹಡಿಯಲ್ಲಿ ಬಟ್ಟೆ ಶೋರೂಂ ಇದ್ದು, ಬೆಳಗ್ಗೆ ಇದರೊಳಗಿನಿಂದ ಹೊಗೆ ಬರುತ್ತಿರುವುದು ಸ್ಥಳೀಯರ ಗಮನಕ್ಕೆ ಬಂದಿದೆ. ತಕ್ಷಣ  ಪೊಲೀಸರಿಗೆ ಮಾಹಿತಿ ನೀಡಲಾಯಿತು. ತಕ್ಷಣ ಅಗ್ನಿಶಾಮಕ ವಾಹನ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದೆ. ಆದರೂ ಅಪಾರ ಪ್ರಮಾಣದ ಬಟ್ಟೆ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

- Advertisement -

ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp