ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಉಪ್ಪಿನಂಗಡಿಯ ಎಂಬಿಎ ಪದವೀಧರೆ ಆತ್ಮಹತ್ಯೆ

Prasthutha|

ಉಡುಪಿ: ಉದ್ಯೋಗ ಸಿಗದ ಹಿನ್ನೆಲೆಯಲ್ಲಿ ಮನನೊಂದು ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಾಪು ತಾಲೂಕಿನ ಕಟ್ಟಿಂಗೇರಿ ಗ್ರಾಮದಲ್ಲಿ ನಡೆದಿದೆ.

- Advertisement -


ಈ ಸಂಬಂಧ ಉಡುಪಿಯ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ಸಹನಾ (23 ) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆ ಕಾಪು ತಾಲೂಕಿನ ಕಟ್ಟಿಂಗೇರಿಯಲ್ಲಿರುವ ಅಕ್ಕನ ಮನೆಗೆ ಬಂದು ವಿಷ ಸೇವಿಸಿದ್ದಳು. ಅಸ್ವಸ್ಥಗೊಂಡಿದ್ದ ಸಹನಾಳನ್ನು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ, ಚಿಕಿತ್ಸೆ ನೀಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.


ಅರ್ಹತೆಗೆ ತಕ್ಕ ಉದ್ಯೋಗ ಸಿಗಲಿಲ್ಲ ಎಂದು ಸಹನಾ ವಿಷ ಸೇವಿಸಿದ್ದಳು. ಒಂದು ವರ್ಷದ ಹಿಂದೆ ಮಂಗಳೂರಲ್ಲಿ ಎಂಬಿಎ ಮಾಡಿದ್ದ ಸಹನಾ, ಉದ್ಯೋಗಕ್ಕಾಗಿ ಅಲೆದಾಡಿದ್ದಳು. ಆದರೆ, ಎಲ್ಲಿಯೂ ತನ್ನ ಅರ್ಹತೆಗೆ ತಕ್ಕ ಕೆಲಸ ಸಿಗದಿದ್ದರಿಂದ ಮನನೊಂದು ವಿಷ ಸೇವಿಸಿದ್ದಳು. ಮಿಷನ್ ಆಸ್ಪತ್ರೆ, ಕೆಎಂಸಿ ಹಾಗೂ ಜಿಲ್ಲಾಸ್ಪತ್ರೆಯ ಸೇರಿದಂತೆ ಮೂರು ಆಸ್ಪತ್ರೆಗಳಲ್ಲಿ 10 ದಿನ ಸಹನಾಗೆ ಚಿಕಿತ್ಸೆ ನೀಡಲಾಗಿತ್ತು. ಆದರೆ, ಎಲ್ಲವೂ ವಿಫಲವಾಗಿದೆ.

Join Whatsapp