ನವದೆಹಲಿ: 2023ನೇ ಸಾಲಿನ ನಾಗರಿಕ ಸೇವಾ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಇಶಿತಾ ಕಿಶೋರ್ ಅಗ್ರಸ್ಥಾನ ಪಡೆದುಕೊಂಡಿದ್ದಾರೆ. ಗರಿಮಾ ಲೋಹಿಯಾ, ಉಮಾ ಹರಿತಿ ಎನ್ 2 ಮತ್ತು 3 ನೇ ಸ್ಥಾನ ಪಡೆದಿದ್ದಾರೆ.
ನಾಗರಿಕ ಸೇವಾ ಪರೀಕ್ಷೆಯಲ್ಲಿ 933 ಅಭ್ಯರ್ಥಿಗಳು ಈ ಬಾರಿ ಅರ್ಹತೆ ಪಡೆದಿದ್ದಾರೆ. ನಾಗರಿಕ ಸೇವೆಗಳ ಪರೀಕ್ಷೆಯನ್ನು ವಾರ್ಷಿಕವಾಗಿ ಮೂರು ಹಂತಗಳಲ್ಲಿ ನಡೆಸಲಾಗುತ್ತದೆ – ಪೂರ್ವಭಾವಿ, ಮುಖ್ಯ ಮತ್ತು ಸಂದರ್ಶನ ನಡೆಸಲಾಗುತ್ತದೆ. UPSC ಯಿಂದ ಭಾರತೀಯ ಆಡಳಿತ ಸೇವೆ (IAS), ಭಾರತೀಯ ವಿದೇಶಾಂಗ ಸೇವೆ (IFS) ಮತ್ತು ಭಾರತೀಯ ಪೊಲೀಸ್ ಸೇವೆ (IPS), ಸೇರಿ ಇತರ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ.