Home ಟಾಪ್ ಸುದ್ದಿಗಳು ಯುಪಿಎಸ್’ಸಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

ಯುಪಿಎಸ್’ಸಿ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ

ನವದೆಹಲಿ: ಪೂಜಾ ಖೇಡ್ಕರ್ ವಿವಾದದ ನಡುವೆ ಕೇಂದ್ರ ಲೋಕಸೇವಾ ಆಯೋಗ(UPSC)ದ ಅಧ್ಯಕ್ಷ ಮನೋಜ್ ಸೋನಿ ರಾಜೀನಾಮೆ ನೀಡಿದ್ದಾರೆ.

ಅವರ ಅಧಿಕಾರಾವಧಿ 2029ಕ್ಕೆ ಕೊನೆಗೊಳ್ಳಬೇಕಿತ್ತು, ಐದು ವರ್ಷಗಳಿರುವಾಗಲೇ ಅವರು ರಾಜೀನಾಮೆ ನೀಡಿದ್ದು ಅನೇಕ ಊಹಾಪೋಹಗಳಿಗೆ ಕಾರಣವಾಗಿದೆ.

ಮಾಹಿತಿ ಪ್ರಕಾರ ಮನೋಜ್ ಸೋನಿ ರಾಷ್ಟ್ರಪತಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಸೋನಿ 2017ರಲ್ಲಿ ಆಯೋಗದ ಸದಸ್ಯರಾಗಿ ಸೇರಿದ್ದರು. ಮೇ 16, 2023ರಂದು ಅವರನ್ನು ಯುಪಿಎಸ್ಸಿ ಅಧ್ಯಕ್ಷರನ್ನಾಗಿ ಮಾಡಲಾಯಿತು. ನೂತನ ಅಧ್ಯಕ್ಷರ ಹೆಸರನ್ನು ಸರ್ಕಾರ ಪ್ರಕಟಿಸಿಲ್ಲ.

Join Whatsapp
Exit mobile version