UPSC ಪರೀಕ್ಷೆ ಅಂತಿಮ ಫಲಿತಾಂಶ ಪ್ರಕಟ: ಶುಭಂ ಕುಮಾರ್ ರಾಷ್ಟ್ರದಲ್ಲೇ ಅಗ್ರಸ್ಥಾನ!

Prasthutha|

ನವದೆಹಲಿ: UPSC ಮುಖ್ಯ ಪರೀಕ್ಷೆ 2020 ರ ಅಂತಿಮ ಫಲಿತಾಂಶವನ್ನು ಶುಕ್ರವಾರ ಪ್ರಕಟಿಸಲಾಗಿದೆ. ಪ್ರಸಕ್ತ UPSC ಪರೀಕ್ಷೆಯಲ್ಲಿ ಪರೀಕ್ಷೆಯಲ್ಲಿ ಶುಭಂ ಕುಮಾರ್ ರಾಷ್ಟ್ರದಲ್ಲೇ ಅಗ್ರಸ್ಥಾನವಾನ್ನು ಪಡೆದಿದ್ದಾರೆ. ಮಾತ್ರವಲ್ಲ ಜಾಗೃತಿ ಅವಸ್ಥಿ ಮತ್ತು ಅಂಕಿತಾ ಜೈನ್ ಕ್ರಮವಾಗಿ ದ್ವಿತೀಯ ಮತ್ತು ತೃತೀಯ ಸ್ಥಾನವನ್ನು ಪಡೆದಿದ್ದಾರೆ.

- Advertisement -

ಆಗಸ್ಟ್ – ಸೆಪ್ಟೆಂಬರ್ 2021 ರಲ್ಲಿ ನಡೆದ ಲಿಖಿತ ಪರೀಕ್ಷೆ ಮತ್ತು ವ್ಯಕ್ತಿತ್ವ ಪರೀಕ್ಷೆಯ ಆಧಾರದಲ್ಲಿ ಒಟ್ಟು 761 ಅಭ್ಯರ್ಥಿಗಳ ನೇಮಕಾತಿಗೆ ಶಿಫಾರಸು ಮಾಡಲಾಗಿದೆ. ಈ ಮಧ್ಯೆ 151 ಅಭ್ಯರ್ಥಿಗಳನ್ನು ತಾತ್ಕಾಲಿಕವಾಗಿ ನೇಮಿಸಿದೆ.

ಅಭ್ಯರ್ಥಿಗಳು upsc.gov.in ನಲ್ಲಿ ಮೆರಿಟ್ ಪಟ್ಟಿಯನ್ನು ಪರಿಶೀಲಿಸಬಹುದು. ಪರೀಕ್ಷಾ ಫಲಿತಾಂಶ 15 ದಿನಗಳ ಕಾಲ ವೆಬ್ ಸೈಟ್ ನಲ್ಲಿ ಲಭ್ಯವಿರುತ್ತದೆ ಎಂದು ಮಂಡಳಿ ತಿಳಿಸಿದೆ.

Join Whatsapp